ಎಲ್ಲಾ ಕ್ರಿಯೆಗೂ ತಕ್ಕ ಪ್ರತಿಕ್ರಿಯೆ ಸಹಜ: ನಿತೀಶ್ ವ್ಯಂಗ್ಯ
ಬಿಹಾರ ವಿಧಾನ ಸಭೆ ಚುನಾವಣೆಯಲ್ಲಿ ಅಬ್ಬರದ ಪ್ರಚಾರ ಮಾಡಿದ ಕೇಸರಿ ಪಾಳೇಯ ಆಂತರಿಕ ಬೇಗುದಿಯಿಂದ ಬಳಲುತ್ತಿದೆ ಎಂದು ಮುಖ್ಯಮಂತ್ರಿ ...

ಪಾಟ್ನಾ: ಬಿಹಾರ ವಿಧಾನ ಸಭೆ ಚುನಾವಣೆಯಲ್ಲಿ ಅಬ್ಬರದ ಪ್ರಚಾರ ಮಾಡಿದ ಕೇಸರಿ ಪಾಳೇಯ ಆಂತರಿಕ ಬೇಗುದಿಯಿಂದ ಬಳಲುತ್ತಿದೆ ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ವ್ಯಂಗ್ಯವಾಡಿದ್ದಾರೆ.
ಬಿಹಾರದಲ್ಲಿ ಬಿಜೆಪಿ ಸೋಲಿಗೆ ಮೋದಿ ಮತ್ತು ಅಮಿತ್ ಶಾ ಅವರೇ ಹೊಣೆ ಎಂದು ಹಿರಿಯ ನಾಯಕರುಗಳಾದ ಎಲ್.ಕೆ.ಆಡ್ವಾಣಿ, ಎಂ.ಎಂ.ಜೋಷಿ, ಶಾಂತಕುಮಾರ್ ಮತ್ತು ಯಶವಂತ್ ಸಿನ್ಹಾ ಹೇಳಿಕೆ ನೀಡಿದ್ದರು. ಬಿಜೆಪಿ ಸೋಲಿಗೆ ಪಕ್ಷದ ವರಿಷ್ಠರು ಮೋದಿ ವಿರುದ್ಧ ಬಂಡಾಯದ ಭಾವುಟ ಬೀಸಿರುವುದಕ್ಕೆ ಪ್ರತಿಕ್ರಿಯೆ ನೀಡಿರುವ ನಿತೀಶ್, 'ಕ್ರಿಯೆಗೆ ತಕ್ಕ ಪ್ರತಿಕ್ರಿಯೆ ಸಹಜ' ಎಂದು ಟೀಕಿಸಿದ್ದಾರೆ.
'ಚುನಾವಣೆ ಪ್ರಚಾರದ ವೇಳೆ ಅಬ್ಬರ ತೋರಿದ ಬಿಜೆಪಿ, ಸೋತ ನಂತರವೂ ಅದೇ ತರಹದ ತೀಕ್ಷ್ಣ ಪ್ರತಿಕ್ರಿಯೆಯೆನ್ನು ಎದುರಿಸಬೇಕು ಎಂದು ನಿತೀಶ್ ಕುಮಾರ್ ಹೇಳಿದ್ದಾರೆ. ಆಡ್ವಾಣಿ ಮತ್ತು ಜೋಷಿ ಬಿಜೆಪಿ ರಾಷ್ಟ್ರದಲ್ಲಿ ನೆಲೆಯೂರಲು ಕಾರಣಕರ್ತರಾದವರು. ಅಂಥವರು ಈ ರೀತಿ ಹೇಳುತ್ತಿದ್ದಾರೆಂದರೆ ಪಕ್ಷದಲ್ಲಿ ಗೊಂದಲವಿದೆ ಎಂದೇ ಅರ್ಥ, ಎಂದು ನಿತೀಶ್ ಕುಮಾರ್ ಅಭಿಪ್ರಾಯ ಪಟ್ಟಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


