ಅಸ್ಸಾಂ ನಲ್ಲಿ ಮೂವರು ಉಗ್ರರ ಬಂಧನ
ದಿಮಾ ಹಸಾವೋ ರಾಷ್ಟ್ರೀಯ ಸೇನೆಗೆ ಸೇರಿದ ಮೂವರು ಉಗ್ರರನ್ನು ಅಸ್ಸಾಂ ರೈಫಲ್ಸ್ ನ ಸಿಬ್ಬಂದಿ ಬಂಧಿಸಿದ್ದಾರೆ.

ಅಸ್ಸಾಂ: ದಿಮಾ ಹಸಾವೋ ರಾಷ್ಟ್ರೀಯ ಸೇನೆಗೆ ಸೇರಿದ ಮೂವರು ಉಗ್ರರನ್ನು ಅಸ್ಸಾಂ ರೈಫಲ್ಸ್ ನ ಸಿಬ್ಬಂದಿ ಬಂಧಿಸಿದ್ದಾರೆ.
ಬಂಧಿತರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಸ್ಸಾಂ ರೈಫಲ್ಸ್ ನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಉಗ್ರರಿರುವ ಬಗ್ಗೆ ಮಾಹಿತಿ ಪಡೆದ ಅಸ್ಸಾಂ ರೈಫಲ್ಸ್ ನ ಸಿಬ್ಬಂದಿಗಳು ದಿಮಾ ಹಸಾವೋ ಜಿಲ್ಲೆಯಲ್ಲಿ ದಾಳಿ ನಡೆಸಿ ಮೂವರು ಉಗ್ರರನ್ನು ಬಂಧಿಸಿದ್ದಾರೆ. ಹಲವು ಸಾವಿರ ಬುಲೆಟ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದರೊಂದಿಗೆ 4 ಎಕೆ ರೈಫಲ್ಸ್ ಗಳನ್ನು ಹಾಗೂ 18 ಲೋಡೆಡ್ ಮ್ಯಾಗಜೀನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬಂಧಿತ ಉಗ್ರರನ್ನು ಪೊಲೀಸರು ಹಾಗೂ ಗುಪ್ತಚರ ಇಲಾಖೆ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಶಸ್ತ್ರಾಸ್ತ್ರಗಳನ್ನು ಮಯಾನ್ಮಾರ್ ನಿಂದ ಮಿಜೋರಾಂ ಮೂಲಕ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎಂದು ಗುಪ್ತಚರ ಇಲಾಖೆ ಅಧಿಕಾರಿಗಳು ಶಂಕಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


