ನಿತೀಶ್ ಪ್ರಮಾಣವಚನ ಕಾರ್ಯಕ್ರಮಕ್ಕೆ ಸೋನಿಯಾ, ಕೇಜ್ರಿವಾಲ್, ಮಮತಾ
ಸತತ ಐದನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ನಿತೀಶ್ ಕುಮಾರ್ ಕಾರ್ಯಕ್ರಮದಲ್ಲಿ...

Published On :
ಪಾಟ್ನಾ: ಸತತ ಐದನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ನಿತೀಶ್ ಕುಮಾರ್ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಭಾಗವಹಿಸಲಿದ್ದಾರೆ.
ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಮಹಾಮೈತ್ರಿಕೂಟ ಭರ್ಜರಿ ಜಯ ಗಳಿಸಿತ್ತು. ಇದರೊಂದಿಗೆ ನವೆಂಬರ್ 20 ರಂದು ನಿತೀಶ್ ಕುಮಾರ್ 5ನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಸಮಾರಂಭಕ್ಕೆ ಗಣ್ಯಾತಿಗಣ್ಯರು ಆಗಮಿಸಲಿದ್ದಾರೆ.
ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್, ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್, ಮಾಜಿ ಪ್ರಧಾನಿ ದೇವೇಗೌಡ, ಜಾರ್ಖಾಂಡ್ ಮಾಜಿ ಮುಖ್ಯಮಂತ್ರಿ ಬಾಬುಲಾಲ್ ಮರಂಡಿ ಮತ್ತು ಹೇಮಂತ್ ಸೋರೆನ್ ಮತ್ತು ಲೋಕ್ ದಳ ನಾಯ ಅಭಯ್ ಚೌಟಾಲಾರನ್ನು ಸಮಾರಂಭಕ್ಕೆ ಆಹ್ವಾನಿಸಲಾಗಿದೆ.
ನಿತೀಶ್ ಕುಮಾರ್ ಅವರ ಪ್ರಮಾಣವಚನ ಕಾರ್ಯಕ್ರಮಕ್ಕೆ ಇವರೆಲ್ಲರಿಗೂ ಆಹ್ವಾನ ನೀಡಲಾಗಿದೆ ಎಂದು ಜೆಡಿಯು ವಕ್ತಾರ ಅಜಯ್ ಅಲೋಕ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ನಿತೀಶ್ ಕುಮಾರ್Nitish KumarSonia Gandhiಸೋನಿಯಾ ಗಾಂಧಿಅರವಿಂದ್ ಕೇಜ್ರಿವಾಲ್Arvind Kejriwaloathಮಮತಾ ಬ್ಯಾನರ್ಜಿಪ್ರಮಾಣವಚನMamta Banerjee
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


