ಭಾರತದಲ್ಲಿ ಅತ್ಯಾಚಾರ ಪ್ರಮಾಣ ದುಪ್ಪಟ್ಟು
ಮಕ್ಕಳು, ಮಹಿಳೆಯರು, ಹಾಗೂ ವೃದ್ದೆಯರ ಮೇಲಿನ ಅತ್ಯಾಚಾರ ಘಟನೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇವೆ. 2001 ರಿಂದ 2014 ರವರೆಗೆ ದೇಶದಲ್ಲಿ...

ತಿರುವನಂತಪುರ: ಮಕ್ಕಳು, ಮಹಿಳೆಯರು, ಹಾಗೂ ವೃದ್ದೆಯರ ಮೇಲಿನ ಅತ್ಯಾಚಾರ ಘಟನೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇವೆ. 2001 ರಿಂದ 2014 ರವರೆಗೆ ದೇಶದಲ್ಲಿ ಅತ್ಯಾಚಾರ ಸಂಖ್ಯೆ ದ್ವಿಗುಣಗೊಂಡಿದೆ.
ಕೊವಲಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಲಿಂಗ ಸಮಾನತೆ ಹಾಗೂ ಭಾರತದಲ್ಲಿ ಮಹಿಳೆಯ ಸ್ಥಿತಿಗತಿ ಸಂಬಂಧ ಬಿಡುಗಡೆಗೊಳಿಸಿದ ವರದಿಯಲ್ಲಿ ಈ ಆತಂಕಕಾರಿ ಮಾಹಿತಿ ಬಹಿರಂಗವಾಗಿದೆ.
2001 ರಲ್ಲಿ 16, 075 ಅತ್ಯಾಚಾರ ಪ್ರಕರಣಗಳು ದಾಖಲಾಗಿದ್ದವು, ಆದರೆ 2014 ರಲ್ಲಿ 36, 375 ಮಾನಭಂಗ ಪ್ರಕರಣಗಳು ದಾಖಲಾಗಿರುವುದು ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ.
ಇದರಲ್ಲಿ ವಿವಾಹಿತ ಮಹಿಳೆಯರ ಮೇಲಿನ ದೌರ್ಜನ್ಯಗಳು ಹೆಚ್ಚಿವೆ. 49,170 ಪ್ರಕರಣ ದಾಖಲಾಗಿದ್ದುದ್ದು, 2014ರ ವೇಳೆಗೆ 122,877 ಪ್ರಕರಣ ದಾಖಲಾಗಿವೆ.
ಇನ್ನು ಮನೆಯಿಂದಲೇ ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಮನೆಯೇ ಪ್ರಮುಖ ವೇದಿಕೆಯಾಗಿದೆ. ಬಾಲ್ಯ ವಿವಾಹ, ಲೈಂಗಿಕ ದೌರ್ಜನ್ಯಗಳು ಮನೆಯಲ್ಲಿಯೇ ಹೆಚ್ಚಿನ ಪ್ರಮಾಣದಲ್ಲಿ ನಡೆಯುತ್ತವೆ ಎಂದು, ಭಾರತದಲ್ಲಿ ಮಹಿಳೆಯರ ಸ್ಥಿತಿಗತಿ ಉನ್ನತ ಸಮಿತಿಯ ಅಧ್ಯಕ್ಷ ರಜಪೂತ್ ಹೇಳಿದ್ದಾರೆ. ಪ್ರಪಂಚದಲ್ಲಿಯೇ ಭಾರತದಲ್ಲಿ ಲಿಂಗ ತಾರತಮ್ಯ ಅತಿ ಹೆಚ್ಚಿದೆ ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


