ದೇಶ

ರಾಜಸ್ಥಾನದಲ್ಲಿ ಟ್ರಕ್‌ಗೆ ಅಂಬುಲೆನ್ಸ್‌ ಢಿಕ್ಕಿ: 5 ಸಾವು

ಅಂಬುಲೆನ್ಸ್ ನಲ್ಲಿ ಮೃತದೇಹವನ್ನು ಸಾಗಿಸುತ್ತಿದ್ದ ವೇಳೆ ಟ್ರಕ್‌ಗೆ ಅಂಬುಲೆನ್ಸ್‌ ಢಿಕ್ಕಿ ಹೊಡೆದ ಪರಿಣಾಮ ಅಂಬುಲೆನ್ಸ್‌ನಲ್ಲಿದ್ದ ಐವರು ದಾರುಣವಾಗಿ ಮೃತಪಟ್ಟಿರುವ ಘಟನೆ...

ರಾಜಸ್ಥಾನದಲ್ಲಿ ಟ್ರಕ್‌ಗೆ ಅಂಬುಲೆನ್ಸ್‌ ಢಿಕ್ಕಿ: 5 ಸಾವು
ಅಪಘಾತ
Published On :
ಜೈಪುರ: ಅಂಬುಲೆನ್ಸ್ ನಲ್ಲಿ ಮೃತದೇಹವನ್ನು ಸಾಗಿಸುತ್ತಿದ್ದ ವೇಳೆ ಟ್ರಕ್‌ಗೆ ಅಂಬುಲೆನ್ಸ್‌ ಢಿಕ್ಕಿ ಹೊಡೆದ ಪರಿಣಾಮ ಅಂಬುಲೆನ್ಸ್‌ನಲ್ಲಿದ್ದ ಐವರು ದಾರುಣವಾಗಿ ಮೃತಪಟ್ಟಿರುವ ಘಟನೆ ರಾಜಸ್ಥಾನದ ಜಾಲೂರ್‌ ಜಿಲ್ಲೆಯಲ್ಲಿ ನಡೆದಿದೆ.
ಮೃತ ಎಂಟು ವರ್ಷದ ಬಾಲಕಿಯ ದೇಹವನ್ನು ಅಂಬುಲೆನ್ಸ್‌ನಲ್ಲಿ ಗುಜರಾತ್‌ನ ಬಾರ್ಮೇರ್‌ ಎಂಬಲ್ಲಿಗೆ ಕೊಂಡೊಯ್ಯಲಾಗುತ್ತಿತ್ತು. ಈ ವೇಳೆ ಮೃತ ಬಾಲಕಿಯ ಸಂಬಂಧಿಕರು ಅಂಬುಲೆನ್ಸ್‌ನಲ್ಲಿದ್ದು, ಅಪಘಾತದಲ್ಲಿ ಐವರು ಮೃತಪಟ್ಟಿದ್ದಾರೆ. ಇನ್ನುಳಿದಂತೆ ಓರ್ವ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 
ಅಪಘಾತದಲ್ಲಿ ಮೃತಪಟ್ಟವರ ಮರಣೋತ್ತರ ಪರೀಕ್ಷೆಯ ಬಳಿಕ ಅವರ ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.