ಜೆಡಿಯು ಶಾಸಕಾಂಗ ಪಕ್ಷದ ನಾಯಕನಾಗಿ ನಿತಿಶ್ ಕುಮಾರ್ ಆಯ್ಕೆ
ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದ ಎರಡೇ ಗಂಟೆಗಳಲ್ಲಿ ಮತ್ತೆ ಜೆಡಿಯು ಶಾಸಕಾಂಗ ಪಕ್ಷದ ನಾಯಕರಾಗಿ ನಿತಿಶ್ ಕುಮಾರ್....

ಪಾಟ್ನಾ: ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದ ಎರಡೇ ಗಂಟೆಗಳಲ್ಲಿ ಮತ್ತೆ ಜೆಡಿಯು ಶಾಸಕಾಂಗ ಪಕ್ಷದ ನಾಯಕರಾಗಿ ನಿತಿಶ್ ಕುಮಾರ್ ಅವರು ಶನಿವಾರ ಆಯ್ಕೆಯಾಗಿದ್ದಾರೆ.
ನಂತರ ಜೆಡಿಯು, ಆರ್‌ಜೆಡಿ ಹಾಗೂ ಕಾಂಗ್ರೆಸ್ ಮಹಾಮೈತ್ರಿಕೂಟದ ಶಾಸಕಾಂಗ ಪಕ್ಷದ ನಾಯಕರಾಗಿ ನಿತಿಶ್ ಕುಮಾರ್ ಅವರನ್ನು ಆಯ್ಕೆ ಮಾಡಲಾಗುತ್ತದೆ.
ಇತ್ತೀಚಿಗೆ ಮುಕ್ತಾಯಗೊಂಡ ವಿಧಾನಸಭೆ ಚುನಾವಣೆಯಲ್ಲಿ ನಿತಿಶ್ ನೇತೃತ್ವದ ಮಹಾಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿತ್ತು.
ಔಪಚಾರಿಕವಾಗಿ ನಿತಿಶ್ ಕುಮಾರ್ ಅವರನ್ನು ಮತ್ತೆ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಜೆಡಿಯು ರಾಜ್ಯಾಧ್ಯಕ್ಷ ವಶಿಷ್ಠ ನರೇನ್ ಅವರು ಹೇಳಿದ್ದಾರೆ.
ನಿತೀಶ್ ಕುಮಾರ್ ಇಂದು ಬೆಳಗ್ಗೆ ರಾಜ್ಯಪಾಲ ರಾಮನಾಥ್ ಕೋವಿಂದ ಅವರನ್ನು ಭೇಟಿ ಮಾಡಿ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಅಲ್ಲದೆ ಪ್ರಸಕ್ತ ವಿಧಾನಸಾಭೆಯನ್ನು ವಿಸರ್ಜಿಸಲು ಕೋರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


