ನಿತೀಶ್ ರಾಜೀನಾಮೆ; ಬಿಹಾರ ವಿಧಾನಸಭೆ ವಿಸರ್ಜನೆಗೆ ಸಿದ್ಧ
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಶನಿವಾರ ರಾಜ್ಯಪಾಲ ರಾಮನಾಥ್ ಕೋವಿಂದ ಅವರಿಗೆ ರಾಜೀನಾಮೆ ಸಲ್ಲಿಸಿದ್ದು, ಪ್ರಸಕ್ತ ವಿಧಾನಸಾಭೆಯನ್ನು ವಿಸರ್ಜಿಸಲು

ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಶನಿವಾರ ರಾಜ್ಯಪಾಲ ರಾಮನಾಥ್ ಕೋವಿಂದ ಅವರಿಗೆ ರಾಜೀನಾಮೆ ಸಲ್ಲಿಸಿದ್ದು, ಪ್ರಸಕ್ತ ವಿಧಾನಸಾಭೆಯನ್ನು ವಿಸರ್ಜಿಸಲು ಕೋರಿದ್ದಾರೆ.
"ನಿತೀಶ್ ಕುಮಾರ್, ರಾಜ್ಯಪಾಲ ರಾಮನಾಥ್ ಕೋವಿಂದ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದ್ದು, ಸಂಪುಟ ನಿರ್ಧಾರವನ್ನು ತಿಳಿಸಿದ್ದಾರೆ" ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ರಾಜೀನಾಮೆ ಸ್ವೀಕರಿಸಿರುವ ರಾಜ್ಯಪಾಲರು, ಮುಂದಿನ ಸರ್ಕಾರ ರಚನೆಯಾಗುವವರೆಗೆ ಉಸ್ತುವಾರಿ ಮುಖ್ಯಮಂತ್ರಿಯಾಗಿ ಮುಂದುವರೆಯಲು ನಿತೀಶ್ ಅವರಿಗೆ ಮನವಿ ಮಾಡಿದ್ದಾರೆ.
ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆದಿರುವ ಮಹಾಮೈತ್ರಿಯನ್ನು ಮುನ್ನಡೆಸಿದ್ದ ನಿತೀಶ್ ಕುಮಾರ್ ಈಗ ನೂತನ ಸರ್ಕಾರವನ್ನು ರಚಿಸಲು ಅವಕಾಶ ಕೋರಲಿದ್ದಾರೆ. ಇಂದು ಮೈತ್ರಿ ಪಕ್ಷಗಳಾದ ಆರ್ ಜೆ ಡಿ ಮತ್ತು ಕಾಂಗ್ರೆಸ್ ಜೊತೆ ಜೆಡಿಯು ಸಭೆ ನಡೆಸಲಿದೆ.
ಸಭೆಯಲ್ಲಿ ಹೊಸದಾಗಿ ಆಯ್ಕೆಯಾಗಿರುವ ಶಾಸಕರು ನಿತೀಶ್ ಕುಮಾರ್ ಅವರನ್ನು ಮಹಾ ಮೈತ್ರಿಯ ನಾಯಕನಾಗಿ ಆಯ್ಕೆ ಮಾಡಲಿದ್ದು ಪ್ರಮಾಣ ವಚನ ಸಮಾರಭದ ದಿನಾಂಕವನ್ನು ನಿಗದಿಪಡಿಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


