ನೆಹರೂ ಉದ್ದೇಶವನ್ನೂ ಯಾರೂ ಅನುಮಾನಿಸಲಾರರು: ರಾಜನಾಥ್ ಸಿಂಗ್
ತತ್ವ ಸಿದ್ಧಾಂತಗಳ ನಡುವೆ ಭಿನ್ನಾಭಿಪ್ರಾಯವಿದ್ದರೂ, ಮಾಜಿ ಪ್ರಧಾನಿ ಜವಹರ್ ಲಾಲ್ ನೆಹರೂ ಅವರ ಉದ್ದೇಶವನ್ನು ಯಾರೂ ಸಹ ಅನುಮಾನಿಸಲಾರರು ...

ನವದೆಹಲಿ: ತತ್ವ ಸಿದ್ಧಾಂತಗಳ ನಡುವೆ ಭಿನ್ನಾಭಿಪ್ರಾಯವಿದ್ದರೂ, ಮಾಜಿ ಪ್ರಧಾನಿ ಜವಹರ್ ಲಾಲ್ ನೆಹರೂ ಅವರ ಉದ್ದೇಶವನ್ನು ಯಾರೂ ಸಹ ಅನುಮಾನಿಸಲಾರರು ಎಂದೂ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಪಂಡಿತ್ ನೆಹರೂ ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ರಾಜನಾಥ್ ಸಿಂಗ್ ನೆಹರೂ ಅವರ ನೀತಿಗಳ ಬಗ್ಗೆ ಏನೇ ಭಿನ್ನಾಭಿಪ್ರಾಯಗಳಿದ್ದರೂ, ದೇಶದ ಅಭಿವೃದ್ಧಿ ಹಾಗೂ ಜನರ ಕಲ್ಯಾಣಕ್ಕಾಗಿ ಅವರು ರೂಪಿಸಿದ್ದ ಯೋಜನೆಗಳ ಬಗ್ಗೆ ಅನುಮಾನಿಸಲು ಸಾಧ್ಯವಿಲ್ಲ ಎಂದು ಹೇಳಿದರು.
ಇನ್ನು ನೆಹರೂ ಅವರು ಪ್ರಧಾನಿಯಾಗಿದ್ದಾಗ ಕೈಗೊಂಡ ಹಲವು ಜನಪ್ರಿಯ ಯೋಜನೆಗಳ ಬಗ್ಗೆ ರಾಜನಾಥ್ ಸಿಂಗ್ ಪ್ರಶಂಸೆ ವ್ಯಕ್ತ ಪಡಿಸಿದ್ದರು. ಮಕ್ಕಳು ಸರಿಯಾದ ಶಿಕ್ಷಣ ಪಡೆದರೇ ಮಾತ್ರ ದೇಶ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ನೆಹರೂ ನಂಬಿದ್ದರು ಎಂದು ಸಿಂಗ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


