ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಅಡ್ವಾಣಿ, ಶತ್ರುಘ್ನ ಸಿನ್ಹಾ ಗೆ ಆಹ್ವಾನ
ಬಿಹಾರ ನಿಯೋಜಿತ ಮುಖ್ಯಮಂತ್ರಿ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಬಿಜೆಪಿ ನಾಯಕ ಎಲ್.ಕೆ ಅಡ್ವಾಣಿ, ಸಂಸದ ಶತ್ರುಘ್ನ ಸಿನ್ಹಾ ಅವರನ್ನು ಆಹ್ವಾನಿಸಿದ್ದಾರೆ.

ಪಾಟ್ನಾ: ನವೆಂಬರ್ 20 ರಂದು ನಡೆಯಲಿರುವ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಬಿಹಾರ ನಿಯೋಜಿತ ಮುಖ್ಯಮಂತ್ರಿ ನಿತೀಶ್ ಕುಮಾರ್ ಬಿಜೆಪಿ ನಾಯಕ ಎಲ್.ಕೆ ಅಡ್ವಾಣಿ, ಸಂಸದ ಶತ್ರುಘ್ನ ಸಿನ್ಹಾ ಅವರನ್ನು ಆಹ್ವಾನಿಸಿದ್ದಾರೆ.
ಬಿಜೆಪಿ ಮಹಾಮೈತ್ರಿ ಕೂಟದ ವಿರುದ್ಧ ಹೀನಾಯ ಸೋಲು ಕಂಡಿದ್ದರು ಬಿಜೆಪಿ ಸಂಸದ ಶತ್ರುಘ್ನ ಸಿನ್ಹಾ ಬಿಹಾರದಲ್ಲಿ ಮಹಾಮೈತ್ರಿಯ ಗೆಲುವು ಪ್ರಜಾಪ್ರಭುತ್ವದ ಗೆಲುವು ಎಂದು ಹೇಳಿಕೆ ನೀಡಿ ಪಕ್ಷದ ವರಿಷ್ಠರ ಕೆಂಗಣ್ಣಿಗೆ ಗುರಿಯಾಗಿದ್ದರು. ಇನ್ನು ಅಡ್ವಾಣಿ ಸಹ ನಿತೀಶ್ ಕುಮಾರ್ ಅವರ ಬಗ್ಗೆ ಮೃದು ಧೋರಣೆ ಹೊಂದಿದ್ದಾರೆ ಎನ್ನಲಾಗಿದೆ.
ಬಿಜೆಪಿಯಲ್ಲಿ ಅಡ್ವಾಣಿ ಹಾಗೂ ಶತ್ರುಘ್ನ ಸಿನ್ಹಾ ಅವರಿಗೆ ಮಾತ್ರ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಹ್ವಾನ ನೀಡಲಾಗಿದ್ದು ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಸೇರಿದಂತೆ ಬೇರೆ ಯಾವುದೇ ಬಿಜೆಪಿ ನಾಯಕರಿಗೆ ಆಹ್ವಾನ ನೀಡಲಾಗಿಲ್ಲ.
ಪದಗ್ರಹಣ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಉಪಾಧ್ಯಕ್ಷ ರಾಹುಲ್ ಗಾಂಧಿ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಒಡಿಶಾ ನವೀನ್ ಪಟ್ನಾಯಕ್ ಸೇರಿದಂತೆ ಹಲವು ಮುಖ್ಯಮಂತ್ರಿಗಳು, ರಾಜಕೀಯ ಮುಖಂಡರು ಭಾಗವಹಿಸಲಿದ್ದಾರೆ. 36 ಸಂಪುಟ ಸದಸ್ಯರೊಂದಿಗೆ ನಿತೀಶ್ ಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


