ದೇಶ

ಜಿ-20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಟರ್ಕಿ ತಲುಪಿದ ಪ್ರಧಾನಿ ಮೋದಿ

ಬ್ರಿಟನ್ ಪ್ರವಾಸ ಮುಗಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಟರ್ಕಿ ತಲುಪಿದ್ದು, ಅಲ್ಲಿ ನಡೆಯುವ ಜಿ-20 ಟರ್ಕಿ 2015...

ಜಿ-20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಟರ್ಕಿ ತಲುಪಿದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ
Published On :
ಲಂಡನ್: ಬ್ರಿಟನ್ ಪ್ರವಾಸ ಮುಗಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಟರ್ಕಿ ತಲುಪಿದ್ದು, ಅಲ್ಲಿ ನಡೆಯುವ ಜಿ-20 ಟರ್ಕಿ 2015 ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. 
ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಬ್ ಎರ್ಡೋಗನ್ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಜಿ20 ಶೃಂಗಸಭೆಯಲ್ಲಿ ಇಂದು ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ.
ಮೂರು ದಿನಗಳ ಬ್ರಿಟನ್ ಭೇಟಿ ಅತ್ಯಂತ ಯಶಸ್ವಿ ಪ್ರವಾಸ ಎಂದು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಟರ್ಕಿಯಲ್ಲಿ ನಡೆಯುವ ಶೃಂಗಸಭೆಯಲ್ಲಿ ಜಾಗತಿಕ ಮುಖಂಡರನ್ನು ಭೇಟಿ ಮಾಡಲಿದ್ದು, ವಿಶ್ವ ಆರ್ಥಿಕತೆ  ಹಾಗೂ ಭದ್ರತೆಗೆ ಸಂಬಂಧಿಸಿದಂತೆ ಮಾತುಕತೆ ನಡೆಯಲಿದೆ ಎಂದು ಟ್ವೀಟ್ ಮಾಡಿದ್ದಾರೆ.
ಸಮಾವೇಶದಲ್ಲಿ ಜಾಗತಿಕ ಆರ್ಥಿಕತೆ, ಅಭಿವೃದ್ಧಿ, ಪರಿಸರ ಬದಲಾವಣೆ, ಹೂಡಿಕೆ, ವ್ಯಾಪಾರ, ಶಕ್ತಿ ಮೂಲಗಳಿಗೆ ಸಂಬಂಧಿಸಿದಂತೆ ವಿವಿಧ ರಾಷ್ಟ್ರಗಳ ನಾಯಕರು ಚರ್ಚೆ ನಡೆಸಲಿದ್ದಾರೆ. ಅಲ್ಲದೆ, ಜಾಗತಿಕ ಭಯೋತ್ಪಾದನೆ, ನಿರಾಶ್ರಿತರ ಸಮಸ್ಯೆಗೆ ಸಂಬಂಧಿಸಿದಂತೆಯೇ ಚರ್ಚೆ ನಡೆಲಿದೆ ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.