ಅಂತಾರಾಷ್ಟ್ರೀಯ ವಾಣಿಜ್ಯ ಮೇಳಕ್ಕೆ ರಾಷ್ಟ್ರಪತಿ ಚಾಲನೆ
ಭಾರತ ಅಂತಾರಾಷ್ಟ್ರೀಯ ವ್ಯಾಪಾರ ಮೇಳಕ್ಕೆ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರು ಶನಿವಾರ ವಿದ್ಯುಕ್ತ ಚಾಲನೆ ನೀಡಿದರು. ಭಾರತ ಅಂತಾರಾಷ್ಟ್ರೀಯ ವ್ಯಾಪಾರ ಮೇಳ-2015 ನವೆಂಬರ್14...

ನವದೆಹಲಿ: ಭಾರತ ಅಂತಾರಾಷ್ಟ್ರೀಯ ವ್ಯಾಪಾರ ಮೇಳಕ್ಕೆ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರು ಶನಿವಾರ ವಿದ್ಯುಕ್ತ ಚಾಲನೆ ನೀಡಿದರು. ಭಾರತ ಅಂತಾರಾಷ್ಟ್ರೀಯ ವ್ಯಾಪಾರ ಮೇಳ-2015 ನವೆಂಬರ್14 ರಿಂದ 27ರವರೆಗೆ ನಡೆಯಲಿದ್ದು, ದೇಶ-ವಿದೇಶಗಳಿಂದ ಹೂಡಿಕೆದಾರರು, ತಂತ್ರಜ್ಞರು ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.
ರಾಜ್ಯ ಸರ್ಕಾರದ ಪರವಾಗಿ ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನಾ ಕೇಂದ್ರವು ಆಯೋಜಿಸಿರುವ ಕರ್ನಾಟಕ ಪೆವಿಲಿಯನ್ ವ್ಯಾಪಾರ ಮೇಳವನ್ನು ಸಣ್ಣ ಕೈಗಾರಿಕೆಗಳ ಸಚಿವ ಜಾರಕಿಹೊಳಿ ಹಾಗೂ ನವದೆಹಲಿಯ ರಾಜ್ಯ ಸರ್ಕಾರದ ವಿಶೇಷ ಪ್ರತಿನಿಧಿ ಅಪ್ಪಾಜಿ ಸಿ.ಎಸ್ ನಾಡಗೌಡ ಅವರು ಉದ್ಘಾಟಿಸಿದರು. ಕರ್ನಾಟಕ ಉತ್ಪಾದಕ ವಲಯದ ಸಾಮರ್ಥ್ಯವನ್ನು ಬಿಂಬಿಸುವ ಮೇಕ್ ಇನ್ ಇಂಡಿಯಾ' ಪರಿಕಲ್ಪನೆಯನ್ನು ಹೊಂದಿದೆ. ಕರ್ನಾಟಕ ರಾಜ್ಯದಲ್ಲೂ ಉತ್ಪಾದಕ ವಲಯವನ್ನು ಪ್ರೋತ್ಸಾಹಿಸಲು ಪೂರಕವಾಗಿರುವ ಯೋಜನೆಗಳನ್ನು ಪ್ರದರ್ಶಿಸಲಾಗುತ್ತಿದೆ. ರಾಜ್ಯ ಸರ್ಕಾರದ ಸಾಧನೆಗಳು, ಯೋಜನೆಗಳು, ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನ, ನೂತನ ತಂತ್ರಜ್ಞಾನಗಳ ಅಳವಡಿಕೆ ಅನ್ನು 3ಡಿ ತಂತ್ರಜ್ಞಾನದ ಮೂಲಕ ವಿಡಿಯೋ ಚಿತ್ರೀಕರಿಸಿ ಪ್ರದರ್ಶಿಸಲಾಗಿದೆ.
ಕರ್ನಾಟಕದ ಕಲೆ, ಸಂಸ್ಕೃತಿ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಪ್ರತಿಬಿಂಬಿಸುವ ಮಾಹಿತಿ ವಿವರಗಳನ್ನು ಪ್ರದರ್ಶಿಸಲಾಗಿದೆ. ಕರ್ನಾಟಕ ಪೆವಿಲಿಯನ್‍ದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳ ಕರಕುಶಲ ಕರ್ಮಿಗಳನ್ನು ಮತ್ತು ಗುಡಿ ಕೈಗಾರಿಕೆಯನ್ನು ಪ್ರೋತ್ಸಾಹಿಸುವ ದೃಷ್ಠಿಯಿಂದ ಕೈಮಗ್ಗ, ಕರಕುಶಲ ಮತ್ತು ಗುಡಿ ಕೈಗಾರಿಕಾ ವ್ಯಾಪಾರ ಮಳಿಗೆಗಳನ್ನು ತೆರೆಯಲಾಗಿದೆ. ಖಾದಿ ಗ್ರಾಮೋದ್ಯೋಗ ಹಾಗೂ ಇತರೆ ಉತ್ಪನ್ನಗಳು ಒಳಗೊಂಡಂತೆ ರಾಜ್ಯದ ವಿವಿಧ ಭಾಗಗಳಿಂದ 70ಕ್ಕೂ ಹೆಚ್ಚು ಮಂದಿ ಕುಶಲಕರ್ಮಿಗಳು ವ್ಯಾಪಾರ ಮಳಿಗೆಗಳನ್ನು ತೆರೆದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಜಾರಕಿಹೊಳಿ ಭಾರತ ಅಂತಾರಾಷ್ಟ್ರೀಯ ವ್ಯಾಪಾರ ಮೇಳ ವಿದೇಶಿ ಬಂಡವಾಳಗಾರರನ್ನು ಸೆಳೆಯಲು ಮತ್ತು ದೇಶದ ಇತರೆ ರಾಜ್ಯಗಳ ನೂತನ ಮಾಹಿತಿ ಮತ್ತು ತಂತ್ರಜ್ಞಾನವನ್ನು ತಿಳಿದುಕೊಳ್ಳಲು ಸಹಾಯಕವಾಗಲಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


