ಕೋಲ್ಕತ್ತಾದಲ್ಲಿ ಶಂಕಿತ ಐಎಸ್ಐ ಏಜೆಂಟ್ ಬಂಧನ
ಕೋಲ್ಕತ್ತಾದಲ್ಲಿ ಶಂಕಿತ ಐಎಸ್ಐ ಏಜೆಂಟ್ ನ್ನು ಬಂಧಿಸಲಾಗಿದ್ದು ಸ್ಥಳೀಯ ನ್ಯಾಯಾಲಯ ಬಂಧಿತನನ್ನು ನವೆಂಬರ್ 29 ವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

ಕೋಲ್ಕತ್ತಾ: ಕೋಲ್ಕತ್ತಾದಲ್ಲಿ ಶಂಕಿತ ಐಎಸ್ಐ ಏಜೆಂಟ್ ನ್ನು ಬಂಧಿಸಲಾಗಿದ್ದು ಸ್ಥಳೀಯ ನ್ಯಾಯಾಲಯ ಬಂಧಿತನನ್ನು ನವೆಂಬರ್ 29 ವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.
ವಿಶೇಷ ಕಾರ್ಯಪಡೆ ಪೊಲೀಸರು(ಎಸ್.ಟಿ.ಎಫ್) ಪೊಲೀಸರು ಐಎಸ್ಐ ಏಜೆಂಟ್ ಅಖ್ತರ್ ಖಾನ್ ಅವರನ್ನು ಬಂಧಿಸಿದ್ದಾರೆ. ಬಂಧಿತನಿಂದ ಹಲವು ನಕಲಿ ದಾಖಲೆ ಹಾಗೂ 1 .72 ಲಕ್ಷ ರೂ ಮೌಲ್ಯದ ಖೋಟಾ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ. ಭಾರತದ ವಿರುದ್ಧ ಯುದ್ಧ ನಡೆಸಲು ಸಂಚು ರೂಪಿಸಿರುವ ಆರೋಪದಡಿ ಅಖ್ತರ್ ಖಾನ್ ಅವರನ್ನು ಬಂಧಿಸಲಾಗಿದೆ.
ಕೋಲ್ಕತ್ತಾ ಪೊಲೀಸರ ಪ್ರಕಾರ ಬಾರ್ಟೆಂಡರ್ ಆಗಿ ಕೆಲಸ ಮಾಡುತ್ತಿದ್ದ ಅಖ್ತರ್ ಖಾನ್, ಪಾಕಿಸ್ತಾನದ ಪರವಾಗಿ ಗೂಢಚಾರಿಕೆ ಮಾಡುತ್ತಿದ್ದ, 2008 ರಲ್ಲಿ ಅಖ್ತರ್ ಖಾನ್ ಭಾರತಕ್ಕೆ ಬಂದಿದ್ದಾನೆ ಎಂದು ಹೇಳಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


