ದೇಶ

ಚೆನ್ನೈನಲ್ಲಿ ಮುಂದುವರೆದ ಮಳೆ, 150ಕ್ಕೂ ಹೆಚ್ಚು ಸ್ಲಂ ನಿವಾಸಿಗಳ ಸ್ಥಳಾಂತರ

ಚೆನ್ನೈನಲ್ಲಿ ಸೋಮವಾರವೂ ಮಳೆ ಮುಂದುವರೆದಿದ್ದು, ಭಾರಿ ಮಳೆಯಿಂದಾಗಿ ಚೆನ್ನೈನ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ...

ಚೆನ್ನೈನಲ್ಲಿ ಮುಂದುವರೆದ ಮಳೆ, 150ಕ್ಕೂ ಹೆಚ್ಚು ಸ್ಲಂ ನಿವಾಸಿಗಳ ಸ್ಥಳಾಂತರ
ಚೆನ್ನೈನಲ್ಲಿ ಭಾರಿ ಮಳೆ (ಸಂಗ್ರಹ ಚಿತ್ರ)
Published On :

ಚೆನ್ನೈ: ಚೆನ್ನೈನಲ್ಲಿ ಸೋಮವಾರವೂ ಮಳೆ ಮುಂದುವರೆದಿದ್ದು, ಭಾರಿ ಮಳೆಯಿಂದಾಗಿ ಚೆನ್ನೈನ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

ಇನ್ನು ನಿನ್ನೆ ಕೇವಲ ಒಂದೇ ದಿನದಲ್ಲೇ ಸುಮಾರು 13ರಿಂದ 17 ಸೆಂ.ಮೀಟನಷ್ಟು ಮಳೆಯಾಗಿದ್ದು, ಚೆನ್ನೈ ತಗ್ಗು ಪ್ರದೇಶಗಳಲ್ಲಿರುವ ಸ್ಲಂಗಳಿಗೆ ನೀರು ನುಗ್ಗಿದೆ ಎಂದು ತಿಳಿದುಬಂದಿದೆ. ಪ್ರಸ್ತುತ  ಸ್ಲಂಗಳಲ್ಲಿದ್ದ ಸುಮಾರು 150ಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಪ್ರದೇಶಗಳಿಗೆ ರವಾನಿಸಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಇತ್ತ ಶಾಲಾ-ಕಾಲೇಜುಗಳಿಗೆ ಘೋಷಣೆ ಮಾಡಿರುವ  ರಜೆಯನ್ನು ಜಿಲ್ಲಾಡಳಿತ ಮುಂದುವರೆಸಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ಸಿಬ್ಬಂದಿಗಳನ್ನು ಚೆನ್ನೈಗೆ ರವಾನಿಸಲಾಗಿದೆ.

60ಕ್ಕೇರಿದ ಸಾವಿನ ಸಂಖ್ಯೆ
ಇತ್ತ ಮಳೆಯಿಂದಾಗಿ ತಮಿಳುನಾಡಿನಲ್ಲಿ ಸಾವಿಗೀಡಾದವರ ಸಂಖ್ಯೆ 60ಕ್ಕೇರಿದ್ದು, ತಮಿಳುನಾಡಿನ ವಿವಿಧ ಪ್ರದೇಶಗಳಲ್ಲಿ ಮಳೆ ಕಾರಣದಿಂದಾಗಿ ಜನ ಸಾವನ್ನಪ್ಪುತ್ತಿದ್ದಾರೆ ಎಂದು  ತಿಳಿದುಬಂದಿದೆ. ನುಂಗಾಂಬಕ್ಕಮ್, ಮೀನಾಂಬಕ್ಕಮ್, ತಿರುತ್ತಣಿ, ವೆಲ್ಲೂರ್ ಮತ್ತು ಕುಡಲೂರ್ ನಲ್ಲಿ ಭಾರಿ ಮಳೆಯಾಗಿದ್ದು, ರೈಲು ಹಳಿಗಳ ಮೇಲೆ ನೀರು ನಿಂತ ಪರಿಣಾಮ ರೈಲು ಸಂಚಾರ  ಅಸ್ತವ್ಯಸ್ತಗೊಂಡಿದೆ. ರಾಜಧಾನಿ ಚೆನ್ನೈ ಸೇರಿದಂತೆ ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದ್ದು, ಮತ್ತಷ್ಟು ಮಳೆಯಾಗುವ ಕುರಿತು ಹವಾಮಾನ ಇಲಾಖೆ ನೀಡಿರುವ  ಎಚ್ಚರಿಕೆ ಮತ್ತಷ್ಟು ಭೀತಿ ಉಂಟುಮಾಡಿದೆ.

ಬೆಂಗಳೂರಿನಲ್ಲಿಯೂ ಸತತ ಭಾರಿ ಮಳೆ
ಇನ್ನು ಹವಾಮಾನ ಇಲಾಖೆಯ ಸಹಾಯಕ ತಜ್ಞ ರಾಜಾರಮೇಶ್ ಅವರು ಹೇಳಿರುವಂತೆ ಬೆಂಗಳೂರಿನಲ್ಲಿಯೂ ಇನ್ನು ಮೂರು ದಿನಗಳ ಕಾಲ ಸತತ ಭಾರಿ ಮಳೆಯಾಗಲಿದೆ. ಕರ್ನಾಟಕದ  ದಕ್ಷಿಣ ಒಳನಾಡಿನಲ್ಲಿ ಮಳೆ ಮುಂದುವರೆದಿದ್ದು, ಬೆಂಗಳೂರಿನಲ್ಲಿ ಇಂದು ಬೆಳಗ್ಗೆಯಿಂದಲೇ ಜಿಟಿ ಜಿಟಿ ಮಳೆ ಬೀಳುತ್ತಿದೆ. ಹೀಗಾಗಿ ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ರಸ್ತೆ ಸಂಚಾರಕ್ಕೆ ತೀವ್ರ ಅಡಚಣೆಯಾಗಿದೆ.

ವಿಡಿಯೋಗಾಗಿ ಇಲ್ಲಿ ಕ್ಲಿಕ್ ಮಾಡಿ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.