ದೇಶ

ಇಸಿಸ್ ಭಾರತದ ಮೇಲೆಯೂ ದಾಳಿ ಮಾಡುವ ಸಾಧ್ಯತೆಯಿದೆ:ರಾಜನಾಥ್ ಸಿಂಗ್

ಪ್ಯಾರಿಸ್ ನ ಭೀಕರ ಭಯೋತ್ಪಾದಕ ದಾಳಿ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್...

ಇಸಿಸ್ ಭಾರತದ ಮೇಲೆಯೂ ದಾಳಿ ಮಾಡುವ ಸಾಧ್ಯತೆಯಿದೆ:ರಾಜನಾಥ್ ಸಿಂಗ್
ಕೇಂದ್ರ ಗೃಹ ಸಚಿವ ರಾಡನಾಥ್ ಸಿಂಗ್
Published On :

ನವದೆಹಲಿ: ಪ್ಯಾರಿಸ್ ನ ಭೀಕರ ಭಯೋತ್ಪಾದಕ ದಾಳಿ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಭವಿಷ್ಯದಲ್ಲಿ ಭಾರತದ ಮೇಲೆ ಕೂಡ ಇಸಿಸ್ ದಾಳಿಯನ್ನು ತಳ್ಳಿಹಾಕುವಂತಿಲ್ಲ ಎಂದು ಹೇಳಿದ್ದಾರೆ.

ಏಷ್ಯಾ ಖಂಡದ ನಾಯಕರ ಸಭೆಯನ್ನು ಉದ್ಘಾಟಿಸಿದ ಬಳಿಕ ಮಾತನಾಡಿದ ಅವರು, ಭಾರತದ ಮೇಲೆ ಕೂಡ ಇಸಿಸ್ ದಾಳಿ ಮಾಡುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ  ಎಚ್ಚರಿಕೆ ವಹಿಸಬೇಕಾಗಿದೆ ಎಂದರು.

ಐಎಸ್ ಎಸ್ ಸಂಘಟನೆ ಇಡೀ ವಿಶ್ವಕ್ಕೆ ಒಂದು ಸವಾಲಾಗಿದ್ದು, ಅದನ್ನು ಮಟ್ಟಹಾಕಲು ಎಲ್ಲಾ ದೇಶಗಳು ಒಗ್ಗಟ್ಟಿನಿಂದ ಹೋರಾಡಬೇಕು.ಇಸಿಸ್ ಸಂಘಟನೆಯ ಸಂಭಾವ್ಯ ದಾಳಿ ಬಗ್ಗೆ ಭಾರತ ಅತ್ಯಂತ ಜಾಗೃತವಾಗಿದೆ. ಈ ನಿಟ್ಟಿನಲ್ಲಿ ಎಲ್ಲಾ ರಾಜ್ಯಗಳಿಗೂ ಭದ್ರತೆ ಕಾಪಾಡುವಂತೆ ಸೂಚನೆ ನೀಡಲಾಗಿದೆ. ಇಸಿಸ್ ಉಗ್ರಗಾಮಿ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಯಾವೊಬ್ಬ ವ್ಯಕ್ತಿಯ ಮೇಲೆ ಅನುಮಾನ ಬಂದರೆ ಸರಿಯಾಗಿ ವಿಚಾರಣೆ ನಡೆಸಬೇಕೆಂದರು.

ಧಾರ್ಮಿಕ ಅಸಹಿಷ್ಣುತೆ ವಿವಾದದ ಬಗ್ಗೆ ಮಾತನಾಡಿದ ಅವರು, ಭಾರತ ಅಸಹಿಷ್ಣುತೆ ದೇಶ ಎಂಬುದನ್ನು ನಾನು ಒಪ್ಪುವುದಿಲ್ಲ ಎಂದು ಪ್ರತಿಕ್ರಿಯಿಸಿದರು.ಕಳೆದ ಶುಕ್ರವಾರ ಫ್ರಾನ್ಸ್ ರಾಜಧಾನಿ ಪ್ಯಾರಿಸ್ ನಲ್ಲಿ ಇಸಿಸ್ ಉಗ್ರಗಾಮಿಗಳು ನಡೆಸಿದ ಹತ್ಯಾಕಾಂಡದಲ್ಲಿ 132 ಮಂದಿ ಸಾವನ್ನಪ್ಪಿದ್ದರು. ಈ ದುರ್ಘಟನೆ ನಂತರ ವಿಶ್ವಾದ್ಯಂತ ದೇಶಗಳು ಎಚ್ಚರಿಕೆಯನ್ನು ನೀಡಿವೆ.

ಪ್ಯಾರಿಸ್ ಮಾದರಿಯಲ್ಲಿ ಅಮೆರಿಕ ರಾಜಧಾನಿ ಮೇಲೆ ಕೂಡ ದಾಳಿ ಮಾಡುತ್ತೇವೆ ಎಂದು ಹೇಳಿರುವ ವಿಡಿಯೋವೊಂದನ್ನು ಇಸಿಸ್  ಬಿಡುಗಡೆ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.