ಅಶೋಕ್ ಸಿಂಘಾಲ್‌ಗೆ ಶ್ರದ್ಧಾಂಜಲಿ ವಿಚಾರ: ವಿಧಾನಸಭೆಯಲ್ಲಿ ಹೈಡ್ರಾಮಾ
ನಿನ್ನೆ ನಿಧನರಾದ ವಿಶ್ವ ಹಿಂದೂ ಪರಿಷತ್ ನಾಯಕ ಅಶೋಕ್ ಸಿಂಘಾಲ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವ ವಿಚಾರಕ್ಕೆ ಸಂಬಂಧಿಸಿದಂತ...
ನವದೆಹಲಿ: ನಿನ್ನೆ ನಿಧನರಾದ ವಿಶ್ವ ಹಿಂದೂ ಪರಿಷತ್ ನಾಯಕ ಅಶೋಕ್ ಸಿಂಘಾಲ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವ ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿ ವಿಧಾನಸಭೆ ಬುಧವಾರ ಭಾರಿ ಹೈಡ್ರಾಮಾವೇ ನಡೆಯಿತು.
ಚಳಿಗಾಲ ಅಧಿವೇಶನದ ಮೊದಲ ದಿನವಾದ ಇಂದು ಪ್ಯಾರೀಸ್ ದಾಳಿಯಲ್ಲಿ ಮೃತಪಟ್ಟವರಿಗೆ ಸದನದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಈ ವೇಳೆ ವಿಎಚ್‌ಪಿ ನಾಯಕ ಅಶೋಕ್ ಸಿಂಘಾಲ್ ಅವರಿಗೂ ಶ್ರದ್ಧಾಂಜಲಿ ಸಲ್ಲಿಸಬೇಕು ಎಂದು ಬಿಜೆಪಿ ಶಾಸಕರು ಒತ್ತಾಯಿಸಿದರು. ಆದರೆ ಇದಕ್ಕೆ ಎಎಪಿ ಶಾಸಕರು ತೀವ್ರ ವಿರೋಧ ವ್ಯಕ್ತಪಡಿಸಿದರು.
ಅಶೋಕ್ ಸಿಂಘಾಲ್ ಅವರು 'ರಾಜ ಪುರುಷ'ರಾಗಿದ್ದು ಸದನದಲ್ಲಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಬೇಕು ಎಂದು ಬಿಜೆಪಿ ಶಾಸಕ ವಿಜೇಂದ್ರ ಗುಪ್ತಾ ಅವರು ಒತ್ತಾಯಿಸಿದರು. ಇದಕ್ಕೆ ಆಮ್ ಆದ್ಮಿ ಶಾಸಕರಾದ ಸೋಮನಾಥ್ ಭಾರ್ತಿ ಹಾಗೂ ಅಮಂತುಲ್ಲಾ ಖಾನ್ ಅವರು ಏರು ಧ್ವನಿಯಲ್ಲಿ ವಿರೋಧ ವ್ಯಕ್ತಪಡಿಸಿದರು. ಅಲ್ಲದೆ ಅಶೋಕ್ ಸಿಂಘಾಲ್ ಅವರು ಭೇದಭಾವ ಮಾಡುತ್ತಿದ್ದರು ಎಂದು ಆರೋಪಿಸಿದರು.
ಅಶೋಕ್ ಸಿಂಘಾಲ್ ಅವರು ಯಾವುದೇ ಸಾಂವಿಧಾನಿಕ ಹುದ್ದೆ ಅಲಂಕರಿಸಿರಲಿಲ್ಲ ಎಂದು ಸ್ಪೀಕರ್ ರಾಮ್ ನಿವಾಸ್ ಗೋಯಲ್ ಅವರು ಬಿಜೆಪಿ ಶಾಸಕರ ಮನವಿಯನ್ನು ತಿರಸ್ಕರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

