ಅಮೇರಿಕಾ ಅಧ್ಯಕ್ಷೀಯ ಚುನಾವಣೆ: ಪ್ರಚಾರ ಕೊನೆಗೊಳಿಸಿದ ಬಾಬಿ ಜಿಂದಾಲ್
ಲೂಸಿಯಾನಾ ಗವರ್ನರ್ ಬಾಬ್ಬಿ ಜಿಂದಾಲ್ ಅವರು ತಮ್ಮ ಅಧ್ಯಕ್ಷೀಯ ಚುನಾನಣಾ ಪ್ರಚಾರವನ್ನು ಕೊನೆಗೊಳಿಸಿದ್ದಾರೆ....

ನವದೆಹಲಿ: ಲೂಸಿಯಾನಾ ಗವರ್ನರ್ ಬಾಬ್ಬಿ ಜಿಂದಾಲ್ ಅವರು ತಮ್ಮ ಅಧ್ಯಕ್ಷೀಯ ಚುನಾನಣಾ ಪ್ರಚಾರವನ್ನು ಕೊನೆಗೊಳಿಸಿದ್ದಾರೆ.
ಇದು ನನ್ನ ಸಮಯ ಅಲ್ಲ ಎಂಬ ಸತ್ಯ ತಮ್ಮ ಅರಿವಿಗೆ ಬಂದಿದೆ. ಹೀಗಾಗಿ ಅಮೆರಿಕದ ಅಧ್ಯಕ್ಷ ಸ್ಥಾನಕ್ಕಾಗಿ ನಡೆಸುತ್ತಿರುವ ಪ್ರಚಾರವನ್ನು ಕೊನೆಗೊಳಿಸುತ್ತಿರುವುದಾಗಿ ಪ್ರಕಟಿಸಲು ನಾನು ಇಲ್ಲಿಗೆ ಬಂದಿದ್ದೇನೆ’ ಎಂದು ಜಿಂದಾಲ್ ಹೇಳಿದ್ದಾರೆ.
ಬಾಬಿ ಜಿಂದಾಲ್ ಜೂನ್ ತಿಂಗಳಲ್ಲಿ ಅಧ್ಯಕ್ಷೀಯ ಸ್ಥಾನದ ಸ್ಪರ್ಧೆಗಾಗಿ ಪ್ರಚಾರಕ್ಕೆ ಇಳಿದಿದ್ದರು. ಆದರೆ ಇತ್ತೀಚಿನ ತಿಂಗಳುಗಳಲ್ಲಿ ಅವರಿಗೆ ಕಡಿಮೆ ಮತಗಳು ಬಂದಿದ್ದವು.ಈ ಹಿನ್ನೆಲೆಯಲ್ಲಿ ಅಧ್ಯಕ್ಷಿಯ ಚುನಾವಣೆಯ ಪ್ರಚಾರವನ್ನು ಅಂತ್ಯಗೊಳಿಸಿದ್ದಾರೆ.
2008ರಿಂದ ಜಿಂದಾಲ್ ಲೂಸಿಯಾನಾ ಗವರ್ನರ್ ಆಗಿ ಸೇವೆ ಸಲ್ಲಿಸಿದ್ದರು. ಭಾರತೀಯ ಮೂಲದವರಾಗಿದ್ದ ಜಿಂದಾಲ್ ಅಧ್ಯಕ್ಷೀಯ ಚುನಾವಣಾ ಸ್ಪರ್ಧೆಯ ಪ್ರಚಾರದ ಸಂದರ್ಭದಲ್ಲಿ ‘ನಾನು ಭಾರತೀಯ ಮೂಲದ ಅಮೆರಿಕನ್’ ಎಂಬುದಾಗಿ ಗುರುತಿಸಿಕೊಳ್ಳಲು ಇಚ್ಛಿಸುವುದಿಲ್ಲ’ ಎಂದು ತಿಳಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


