ಭೂಗತ ದೊರೆ ಛೋಟಾ ಶಕೀಲ್ ಸಹಚರನ ಬಂಧಿಸಿದ ಸಿಸಿಬಿ ಪೊಲೀಸರು
ಭೂಗತ ಪಾತಕಿ ಛೋಟಾ ಶಕೀಲ್ ನೊಂದಿಗೆ ನಿರಂತರ ಸಂಪರ್ಕದಲ್ಲಿದ್ದ ಸಹಚರನನ್ನು ಸಿಸಿಬಿ ಪೊಲೀಸರು...

Published On :
ಬೆಂಗಳೂರು: ಭೂಗತ ಪಾತಕಿ ಛೋಟಾ ಶಕೀಲ್ ನೊಂದಿಗೆ ನಿರಂತರ ಸಂಪರ್ಕದಲ್ಲಿದ್ದ ಸಹಚರನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಛೋಟಾ ಶಕೀಲ್ ನ ಸಹಚರ ಸೈಯದ್ ನಿಯಾಮತ್ (28) ಬಂಧಿತ ಆರೋಪಿ. ಈತ ಛೋಟಾ ಶಕೀಲ್ ನೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ದುಷ್ಕೃತ್ಯವೆಸಗಲು ಸಂಚು ರೂಪಿಸುತ್ತಿದ್ದನು. ಅಷ್ಟೇ ಅಲ್ಲದೇ, ಚೋಟಾ ರಾಜನ್ ಸೂಚನೆ ಮೇರೆಗೆ ರಾಜಕೀಯ ಕೆಲ ಮುಖಂಡರ ಕೊಲೆಗೆ ಸಂಚು ರೂಪಿಸಿದ್ದ ಎಂಬ ಮಾಹಿತಿ ಸಿಸಿಬಿ ಪೊಲೀಸರಿಗೆ ಲಭ್ಯವಾಗಿದೆ.
ಬಿಸ್ಮಿಲ್ಲಾ ನಗರದಲ್ಲಿ ವಾಸವಾಗಿದ್ದಾನೆ ಎಂಬ ಮಾಹಿತಿ ತಿಳಿದ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಸೈಯ್ಯದ್ ವಿರುದ್ಧ ಶಿವಾಜಿನಗರ, ತಿಲಕ್‌ನಗರ, ಪುಲಕೇಶಿನಗರ, ಸಂಪಿಗೆಹಳ್ಳಿ, ಭಾರತಿನಗರ ಠಾಣೆಗಳಲ್ಲಿ 8ಕ್ಕೂ ಕೊಲೆ, ದರೋಡೆ, ಶಸ್ತ್ರಾಸ್ತ್ರ ಸಂಗ್ರಹ ಸಂಬಂಧಪಟ್ಟಂತೆ ಪ್ರಕರಣಗಳು ದಾಖಲಾಗಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


