ಅಭಿವೃದ್ಧಿಗೆ ನೆಹರು, ಇಂದಿರಾ ಅನುಸರಿಸಿ: ಮೋದಿಗೆ ಮನಮೋಹನ್ ಸಿಂಗ್ ಸಲಹೆ
ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ಯೋಜನೆಗಳಿಗೆ ಯಾವುದೇ ಗೊತ್ತು ಗುರಿ ಇಲ್ಲ ಎಂದಿರುವ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು, ಅಭಿವೃದ್ಧಿಯಲ್ಲಿ...

ನವದೆಹಲಿ: ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ಯೋಜನೆಗಳಿಗೆ ಯಾವುದೇ ಗೊತ್ತು ಗುರಿ ಇಲ್ಲ ಎಂದಿರುವ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು, ಅಭಿವೃದ್ಧಿಯಲ್ಲಿ ಪಂಡಿತ ಜವಾಹರ್ ಲಾಲ್ ನೆಹರು ಹಾಗೂ ಇಂದಿರಾ ಗಾಂಧಿ ಅವರನ್ನು ಅನುಸರಿಸುವಂತೆ ಗುರುವಾರ ಸಲಹೆ ನೀಡಿದ್ದಾರೆ.
ಇಂದಿರಾ ಗಾಂಧಿ ಅವರ 98ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಪ್ರಧಾನಿ, 'ಭಾರತದಲ್ಲಿ ಕೃಷಿ ಅಭಿವೃದ್ಧಿಗೆ ನೆಹರು ಹಾಗೂ ಇಂದಿರಾ ಗಾಂಧಿ ಕಾರಣವಾಗಿದ್ದು, ಪ್ರಧಾನಿ ಮೋದಿ ಅವರು ಅವರಿಂದ ಪಾಠ ಕಲಿಯಬೇಕು ಎಂದರು'.
'ಒಮ್ಮೆ ಇತಿಹಾಸವನ್ನು ನೋಡಿ, ದೇಶದ ಆರ್ಥಿಕತೆಯನ್ನು ಬಲಪಡಿಸಿದ ಕಾಂಗ್ರೆಸ್ ಮಹತ್ವ ತಿಳಿಯುತ್ತದೆ ಮತ್ತು ಅದನ್ನು ಗೊತ್ತು ಗುರಿ ಇಲ್ಲದ ಇಂದಿನ ಯೋಜನೆಗಳೊಂದಿಗೆ ಹೋಲಿಕೆ ಮಾಡಿ' ಎಂದು ಹೇಳಿದ್ದಾರೆ.
ಮಾಜಿ ಪ್ರಧಾನಿ ಹಾಗೂ ಬಿಜೆಪಿ ಹಿರಿಯ ನಾಯಕ ಅಟಲ್ ಬಿಹಾರಿ ವಾಜಪೇಯಿ ಅವರು ಪ್ರತಿಪಕ್ಷದ ನಾಯಕರಾಗಿದ್ದಾಗ ಸಂಸತ್ತಿನಲ್ಲಿ ಇಂದಿರಾ ಗಾಂಧಿ ಅವರನ್ನು 'ದುರ್ಗಾ' ಎಂದಿದ್ದನ್ನು ಸಿಂಗ್ ಈ ವೇಳೆ ನೆನಪಿಸಿಕೊಂಡರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


