ಟ್ವಿಟರ್ ನಲ್ಲಿ ಅತಿ ಹೆಚ್ಚು ಅನುಯಾಯಿಗಳನ್ನು ಹೊಂದಿರುವ ಎರಡನೇ ನಾಯಕ ಅರವಿಂದ್ ಕೇಜ್ರಿವಾಲ್
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಟ್ವಿಟರ್ ನಲ್ಲಿ ಅತಿ ಹೆಚ್ಚು ಅನುಯಾಯಿಗಳನ್ನು ಹೊಂದಿರುವ ಎರಡನೇ ನಾಯಕನಾಗಿದ್ದಾರೆ.

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಟ್ವಿಟರ್ ನಲ್ಲಿ ಅತಿ ಹೆಚ್ಚು ಅನುಯಾಯಿಗಳನ್ನು ಹೊಂದಿರುವ ಭಾರತದ ಎರಡನೇ ರಾಜಕಾರಣಿಯಾಗಿದ್ದಾರೆ.
ಮೈಕ್ರೋಬ್ಲಾಗಿಂಗ್ ಸೈಟ್ ನಲ್ಲಿ ಅರವಿಂದ್ ಕೇಜ್ರಿವಾಲ್ ಅವರಗೆ 6 ಮಿಲಿಯನ್ ಜನ ಅನುಯಾಯಿಗಳಿದ್ದಾರೆ. ಬುಧವಾರ ತಡ ರಾತ್ರಿ ಕೇಜ್ರಿವಾಲ್ ಅನುಯಾಯಿಗಳ ಸಂಖ್ಯೆ 6 ಮಿಲಿಯನ್ ದಾಟಿದೆ ಎಂದು ಆಮ್ ಆದ್ಮಿ ಪಕ್ಷದ ಸಾಮಾಜಿಕ ಜಾಲತಾಣ ನಿರ್ವಹಣಾ ವಿಭಾಗದ ಮುಖ್ಯಸ್ಥ ಅಂಕಿತ್ ಲಾಲ್ ಟ್ವೀಟ್ ಮಾಡಿದ್ದಾರೆ.
ಅತಿ ಹೆಚ್ಚು ಅನುಯಾಯಿಗಳನ್ನು ಹೊಂದಿರುವ ಎರಡನೇ ನಾಯಕನಾಗಿರುವ ಕೇಜ್ರಿವಾಲ್, ಅತಿ ಹೆಚ್ಚು ಅನುಯಾಯಿಗಳನ್ನು ಹೊಂದಿರುವ ಮೊದಲನೇ ರಾಜಕಾರಣಿ ಪ್ರಧಾನಿ ನರೇಂದ್ರ ಮೋದಿ ಅವರ ಹಾದಿಯಲ್ಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರಂತೆಯೇ ಅರವಿಂದ್ ಕೇಜ್ರಿವಾಲ್ ಸಹ ಸಾಮಾಜಿಕ ಜಾಲತಾಣದ ಮೂಲಕ ಜನರನ್ನು ತಲುಪುವುದರಲ್ಲಿ ಪ್ರಸಿದ್ಧಿ ಪಡೆದಿದ್ದಾರೆ.
ಅರವಿಂದ್ ಕೇಜ್ರಿವಾಲ್ ಅವರೊಂದಿಗೆ ಕಾಂಗ್ರೆಸ್ ನಾಯಕ ಶಶಿ ತರೂರ್ ಸಹ ಟ್ವಿಟರ್ ನಲ್ಲಿ ಅತಿ ಹೆಚ್ಚು ಅನುಯಾಯಿಗಳನ್ನು ಹೊಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


