ಲಾಲು ಪುತ್ರನಿಗೆ ಬಿಹಾರ ಉಪ ಮುಖ್ಯಮಂತ್ರಿ ಪಟ್ಟ?
ಬಿಹಾರ ಮಾಜಿ ಮುಖ್ಯಮಂತ್ರಿಗಳಾದ ಲಾಲು ಪ್ರಸಾದ್ ಯಾದವ್ ಹಾಗೂ ರಾಬ್ಡಿದೇವಿ ಅವರ ಪುತ್ರ ತೇಜಸ್ವಿ ಯಾದವ್ ಅವರು ಬಿಹಾರದ ಉಪ...

ನವದೆಹಲಿ: ಬಿಹಾರ ಮಾಜಿ ಮುಖ್ಯಮಂತ್ರಿಗಳಾದ ಲಾಲು ಪ್ರಸಾದ್ ಯಾದವ್ ಹಾಗೂ ರಾಬ್ಡಿದೇವಿ ಅವರ ಪುತ್ರ ತೇಜಸ್ವಿ ಯಾದವ್ ಅವರು ಬಿಹಾರದ ಉಪ ಮುಖ್ಯಮಂತ್ರಿಯಾಗುವ ಸಾಧ್ಯತೆ ಇದೆ.
ಮಾಧ್ಯಮ ವರದಿಗಳ ಪ್ರಕಾರ, ಆರ್ಜೆಡಿ ಶಾಸಕಾಂಗ ಪಕ್ಷದ ನಾಯಕನನ್ನಾಗಿ ತೇಜಸ್ವಿ ಯಾದವ್ ಅವರನ್ನು ಆಯ್ಕೆ ಮಾಡುತ್ತಿದ್ದು, ನಾಳೆ ಐದನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿರುವ ನಿತಿಶ್ ಕುಮಾರ್ ಸಂಪುಟದಲ್ಲಿ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಲಾಗುತ್ತಿದೆ ಎನ್ನಲಾಗಿದೆ.
ನಿತಿಶ್ ಕುಮಾರ್ ಅವರು ಇತ್ತೀಚಿಗಷ್ಟೇ ಜೆಡಿಯು, ಆರ್ಜೆಡಿ ಹಾಗೂ ಕಾಂಗ್ರೆಸ್ ಪಕ್ಷಗಳ ಮಹಾಮೈತ್ರಿಕೂಟ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾಗಿದ್ದರು.
ಜೆಡಿಯುಗೆ ಮುಖ್ಯಮಂತ್ರಿ ಸ್ಥಾನ, ಆರ್ಜೆಡಿಗೆ ಉಪ ಮುಖ್ಯಮಂತ್ರಿ ಸ್ಥಾನ ಹಾಗೂ ಕಾಂಗ್ರೆಸ್ಗೆ ಸ್ಪೀಕರ್ ಸ್ಥಾನ ನೀಡುವ ಫಾರ್ಮೂಲಾ ಸಿದ್ಧಗೊಂಡಿದ್ದು, ಕಾಂಗ್ರೆಸ್ನಿಂದ 9 ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಸದಾನಂದ್ ಸಿಂಗ್ ಅವರು ಸ್ಪೀಕರ್ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


