ಶೀನಾ ಬೋರಾ ಕೇಸ್: ಸಿಬಿಐನಿಂದ ಚಾರ್ಜ್‌ಶೀಟ್ ಸಲ್ಲಿಕೆ
ಶೀನಾ ಬೋರಾ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಗುರುವಾರ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದೆ.

ಮುಂಬೈ: ಶೀನಾ ಬೋರಾ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಗುರುವಾರ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದೆ.
ಸಿಬಿಐ ಇಂದು ಮುಂಬೈನ ಇಸ್‌ಪ್ಲಾನಡೆ ಕೋರ್ಟ್‌ಗೆ 100 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ್ದು, ಶೀನಾ ಬೋರಾ ತಾಯಿ ಇಂದ್ರಾಣಿ ಮುಖರ್ಜಿ ಹಾಗೂ ಆಕೆಯ ಮಾಜಿ ಪತಿ ಸಂಜೀವ್ ಖನ್ನಾ, ಚಾಲಕ ಶ್ಯಾಮ್ ರೈನನ್ನು ಪ್ರಕರಣದಲ್ಲಿ ಆರೋಪಿಗಳನ್ನಾಗಿ ಮಾಡಲಾಗಿದೆ.
ಇದಕ್ಕೂ ಮುನ್ನ ಶ್ಯಾಮ್ ರೈ ಹೇಳಿಕೆಯನ್ನು ಇಂದು ಕೋರ್ಟ್‌ನಲ್ಲಿ ದಾಖಲಿಸಿಕೊಳ್ಳಲಾಗಿತ್ತು.
ಏಪ್ರಿಲ್, 2012ರಲ್ಲಿ ಕಣ್ಮರೆಯಾಗಿದ್ದ ಶೀನಾ ಬೋರಾಳ ಮುಂಬೈನ ರಾಯ್ ಗಢದ ಅರಣ್ಯದಲ್ಲಿ ಪತ್ತೆಯಾಗಿತ್ತು. ತಾಯಿ-ಮಗಳ ಮಧ್ಯೆ ಹಣಕಾಸಿನ ಭಿನ್ನಾಭಿಪ್ರಾಯದಿಂದ ಇಂದ್ರಾಣಿ ಶೀನಾ ಬೋರಾಳನ್ನು ಹತ್ಯೆ ಮಾಡಿರಬಹುದು ಎಂದು ಮೇಲ್ನೋಟಕ್ಕೆ ಕಂಡುಬಂದಿದೆ.
ಪೊಲೀಸರ ತನಿಖೆಯಿಂದ ಇಂದ್ರಾಣಿ ಮುಖರ್ಜಿ ಆಕೆಯ ಮಾಜಿ ಪತಿ ಸಂಜೀವ್ ಖನ್ನಾ ಮತ್ತು ಕಾರು ಚಾಲಕ ಶ್ಯಾಮ್ ಜೊತೆ ಸೇರಿ ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಇಂದ್ರಾಣಿಯನ್ನು ಮುಂಬೈ ಪೊಲೀಸರು ಆಗಸ್ಟ್ 28ರಂದು ಬಂಧಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


