ದೇಶ

ನಿತಿಶ್ ಪ್ರಮಾಣವಚನಕ್ಕೆ ಪ್ರಧಾನಿ ಪ್ರತಿನಿಧಿಯಾಗಿ ವೆಂಕಯ್ಯ ನಾಯ್ಡು

ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗಿಯಾಗುವಂತೆ ಬಿಹಾರ ಮುಖ್ಯಮಂತ್ರಿ ನಿತಿಶ್ ಕುಮಾರ್ ಅವರು ನೀಡಿದ್ದ ಆಹ್ವಾನವನ್ನು...

ನಿತಿಶ್ ಪ್ರಮಾಣವಚನಕ್ಕೆ ಪ್ರಧಾನಿ ಪ್ರತಿನಿಧಿಯಾಗಿ ವೆಂಕಯ್ಯ ನಾಯ್ಡು
ನಿತಿಶ್ ಕುಮಾರ್
Published On :

ಪಾಟ್ನಾ: ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗಿಯಾಗುವಂತೆ ಬಿಹಾರ ಮುಖ್ಯಮಂತ್ರಿ ನಿತಿಶ್ ಕುಮಾರ್ ಅವರು ನೀಡಿದ್ದ ಆಹ್ವಾನವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಒಪ್ಪಿಕೊಂಡಿದ್ದು, ಸಮಾರಂಭಕ್ಕೆ ತಮ್ಮ ಪ್ರತಿನಿಧಿಯಾಗಿ ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಅವರನ್ನು ಕಳುಹಿಸುತ್ತಿದ್ದಾರೆ.

ನಾಳೆ ಮಧ್ಯಾಹ್ನ 2 ಗಂಟೆಗೆ ಗಾಂಧಿ ಮೈದಾನದಲ್ಲಿ ನಡೆಯುವ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಆಗಮಿಸುವಂತೆ ನಿತಿಶ್ ಅವರು ಪ್ರಧಾನಿಯವರಿಗೆ ದೂರವಾಣಿ ಕರೆ ಮಾಡಿ ಆಹ್ವಾನ ನೀಡಿದ್ದರು ಎಂದು ಮುಖ್ಯಮಂತ್ರಿಗಳ ಕಚೇರಿ ತಿಳಿಸಿದೆ.

ಪೂರ್ವ ನಿಗದಿತ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಪ್ರಧಾನಿಯವರು ಸಮಾರಂಭಕ್ಕೆ ಆಗಮಿಸುತ್ತಿಲ್ಲ. ಆದರೆ ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿ ಸಂಸದೀಯ ವ್ಯವಹಾರಗಳ ಸಚಿವ ವೆಂಕಯ್ಯ ನಾಯ್ಡು ಹಾಗೂ ರಾಜ್ಯ ಸಚಿವ ರಾಜೀವ್ ಪ್ರತಾಪ್ ರೂಡಿ ಅವರು ಆಗಮಿಸುತ್ತಿದ್ದಾರೆ ಎಂದು ಬಿಹಾರ ಬಿಜೆಪಿ ಅಧ್ಯಕ್ಷ ಸಂಜಯ್ ಮಯುಖ್ ಅವರು ತಿಳಿಸಿದ್ದಾರೆ.

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ 9 ರಾಜ್ಯಗಳ ಮುಖ್ಯಮಂತ್ರಿಗಳು ನಾಳಿನ ಸಮಾರಂಭದಲ್ಲಿ ಭಾಗವಹಿಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.