ಗೂಗಲ್‌ನಿಂದ ದೆಹಲಿ ವಿದ್ಯಾರ್ಥಿಗೆ ವಾರ್ಷಿಕ ರೂ. 1.27 ಕೋಟಿ ಜಾಬ್ ಆಫರ್
ದೆಹಲಿ ತಾಂತ್ರಿಕ ವಿಶ್ವವಿದ್ಯಾಲಯ(ಡಿಟಿಯು)ದಲ್ಲಿ ವ್ಯಾಸಂಗ ಮಾಡುತ್ತಿರುವ ದೆಹಲಿಯ ಚೇತನ ಕಕ್ಕರ್ ನಿಗೆ ಗೂಗಲ್ ಕಂಪನಿ ವರ್ಷಕ್ಕೆ 1.27 ಕೋಟಿ ರು. ವೇತನದ ಪ್ಯಾಕೇಜ್ ನೀಡಿದೆ...

Published On :
ದೆಹಲಿ ತಾಂತ್ರಿಕ ವಿಶ್ವವಿದ್ಯಾಲಯ(ಡಿಟಿಯು)ದಲ್ಲಿ ವ್ಯಾಸಂಗ ಮಾಡುತ್ತಿರುವ ದೆಹಲಿಯ ಚೇತನ ಕಕ್ಕರ್ ಅವರಿಗೆಗೆ ಗೂಗಲ್ ಕಂಪನಿ ವರ್ಷಕ್ಕೆ 1.27 ಕೋಟಿ ರು. ವೇತನ ಪ್ಯಾಕೇಜ್ ನ ಕೆಲಸ ನೀಡಿದೆ.
ಕ್ಯಾಂಪಸ್ ಪ್ಲೇಸ್‌ಮೆಂಟ್ ಸಂದರ್ಭದಲ್ಲಿ ಇದು ಅಮೆರಿಕ ಮೂಲದ ಇಂಟರ್‌ನೆಟ್ ದೈತ್ಯ ಗೂಗಲ್ ಆಫರ್ ಮಾಡಿದ ದೊಡ್ಡ ಮೊತ್ತದ ಪ್ಯಾಕೇಜ್ ಇದಾಗಿದೆ.
ಮಾಹಿತಿ ತಂತ್ರಜ್ಞಾನ ವಿಭಾಗದಲ್ಲಿ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಚೇತನ್ ಕಕ್ಕರ್ ಗೂಗಲ್ ನೀಡಿದ ಆಕರ್ಷಕ ಆಫರ್ ಒಪ್ಪಿಕೊಂಡಿದ್ದು, ಅಂತಿಮ ವರ್ಷದ ಪರೀಕ್ಷೆಗಳು ಮುಗಿದ ನಂತರ ಕ್ಯಾಲಿಫೋರ್ನಿಯಾದ ಗೂಗಲ್ ಕಚೇರಿಗೆ ತೆರಳಲಿದ್ದಾರೆ.
ನನ್ನ ನಿರಂತರ ಶ್ರಮಕ್ಕೆ ತಕ್ಕ ಪ್ರತಿಫಲ ಸಿಕ್ಕಿದ್ದು ಗೂಗಲ್ ಸಂಸ್ಥೆಯೊಂದಿಗೆ ಕಾರ್ಯನಿರ್ವಹಿಸಲು ಉತ್ಸುಕನಾಗಿದ್ದೇನೆ ಎಂದು ಚೇತನ್ ಕಕ್ಕರ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ನವದೆಹಲಿNew DelhiGoogleಗೂಗಲ್Chetan KakkarDelhi Technological Universityಚೇತನ್ ಕಕ್ಕರ್ದೆಹಲಿ ತಾಂತ್ರಿಕ ವಿಶ್ವವಿದ್ಯಾಲಯ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


