ಆರ್ಮಿ ಕ್ಯಾಂಪ್ ನ ಮರಕ್ಕೆ ನೇಣುಬಿಗಿದುಕೊಂಡು ಯೋಧನ ಆತ್ಮಹತ್ಯೆ
ಯೋಧನೊಬ್ಬ ನೇಣಿಗೆ ಶರಣಾಗಿರುವ ಘಟನೆ ನವೆಂಬರ್ 20 ರಂದು ಜಮ್ಮು-ಕಾಶ್ಮೀರದಲ್ಲಿ ನಡೆದಿದೆ.

ಜಮ್ಮು: ಯೋಧನೊಬ್ಬ ನೇಣಿಗೆ ಶರಣಾಗಿರುವ ಘಟನೆ ನವೆಂಬರ್ 20 ರಂದು ಜಮ್ಮು-ಕಾಶ್ಮೀರದಲ್ಲಿ ನಡೆದಿದೆ.
ಜಮ್ಮು-ಕಾಶ್ಮೀರದ ರೆಯಾಸಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಆರ್ಮಿ ಕ್ಯಾಂಪ್ ನ ಮರಕ್ಕೆ ಯೋಧ ನೇಣುಬಿಗಿದುಕೊಂಡಿದ್ದಾನೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ಯೋಧನನ್ನು ಲ್ಯಾನ್ಸ್ ನಾಯ್ಕ್ ರಾಮ್ ಸಿಯಾ ಎಂದು ಗುರುತಿಸಲಾಗಿದ್ದು ಮಧ್ಯಪ್ರದೇಶದ ಭಿಂದ್ ಮೂಲದವರೆಂದು ಗುರುತಿಸಲಾಗಿದೆ.
ಪ್ರತಿ ಮೂರು ದಿನಕ್ಕೊಮ್ಮೆ ಓರ್ವ ಯೋಧ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾನೆ ಎಂಬ ಅಂಶ ಇತ್ತಿಚಿಗೆ ಬಹಿರಂಗವಾಗಿತ್ತು. ಅಲ್ಲದೇ ಕಳೆದ 7 ವರ್ಷಗಳಲ್ಲಿ 228 ಸಿ.ಆರ್.ಪಿ.ಎಫ್ ಯೋಧರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು ರಾಜ್ಯಸಭೆಗೆ ತಿಳಿಸಿದ್ದರು. ಅಂಕಿ- ಅಂಶಗಳ ಪ್ರಕಾರ 2008 -2014 ರ ಅವಧಿಯಲ್ಲಿ ಅತಿ ಹೆಚ್ಚು ಸಿ.ಆರ್.ಪಿ.ಎಫ್ ಯೋಧರು ಮೃತಪಟ್ಟಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


