ದೇಶ

ಮಟನ್ ಅಡುಗೆ ಮಾಡಲು ನಿರಾಕರಿಸಿದ ಪತ್ನಿಯನ್ನು ಬೆಂಕಿ ಹಚ್ಚಿ ಕೊಂದ ಕಿರಾತಕ

ಮಟನ್ ಅಡುಗೆ ಮಾಡಲು ನಿರಾಕರಿಸಿದ ಪತ್ನಿಯನ್ನು ಕಡಿದ ಅಮಲಿನಲ್ಲಿದ್ದ ಗಂಡ ಬೆಂಕಿ ಹಚ್ಚಿ ಕೊಂದಿರುವ ಘಟನೆ ಮಧ್ಯಪ್ರದೇಶದ ಜಬಲ್ ಪುರ ಜಿಲ್ಲೆಯಲ್ಲಿ ನಡೆದಿದೆ...

ಮಟನ್ ಅಡುಗೆ ಮಾಡಲು ನಿರಾಕರಿಸಿದ ಪತ್ನಿಯನ್ನು ಬೆಂಕಿ ಹಚ್ಚಿ ಕೊಂದ ಕಿರಾತಕ
ಸಾಂದರ್ಭಿಕ ಚಿತ್ರ
Published On :

ಜಬಲ್ ಪುರ: ಮಟನ್ ಅಡುಗೆ ಮಾಡಲು ನಿರಾಕರಿಸಿದ ಪತ್ನಿಯನ್ನು ಕಡಿದ ಅಮಲಿನಲ್ಲಿದ್ದ ಗಂಡ ಬೆಂಕಿ ಹಚ್ಚಿ ಕೊಂದಿರುವ ಘಟನೆ ಮಧ್ಯಪ್ರದೇಶದ ಜಬಲ್ ಪುರ ಜಿಲ್ಲೆಯಲ್ಲಿ ನಡೆದಿದೆ.

ಸುಟ್ಟ ಗಾಯಗಳಿಂದ ನರಳುತ್ತಿದ್ದ ಪತ್ನಿ ಶಬ್ನಂಳನ್ನು ಆಕೆಯ ಗಂಡ ಲಿಖಾಯತ್ ಆಸ್ಪತ್ರೆಗೆ ದಾಖಿಲಿಸಿ, ಘಟನೆ ಆಕಸ್ಮಿಕವಾಗಿ ನಡೆಯಿತು ಎಂದು ಪೊಲೀಸರಿಗೆ ಹೇಳಿ ನಂಬಿಸಲು ಯತ್ನಿಸಿದ್ದ. ಆದರೆ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಶಬ್ನಂ ವೈದ್ಯರ ಬಳಿ ಸತ್ಯ ಹೇಳುತ್ತಿದ್ದಂತೆ ಲಿಖಾಯತ್ ಆಸ್ಪತ್ರೆಯಿಂದ ಪರಾರಿಯಾಗಿದ್ದಾನೆ.

ಇನ್ನೂ ಈ ದಂಪತಿಗೆ 7 ವರ್ಷದ ಹೆಣ್ಣು ಮಗಳಿದ್ದಾಳೆ. ಗುರುವಾರ ಕೃತ್ಯ ನಡೆದಿದೆ. ತೀವ್ರ ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಶಬ್ನಂ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾಳೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.