ಭಾರತದಲ್ಲಿ ಹೆಚ್ಚಿನ ಹಿಂದೂಗಳು ಗೋ ವ್ಯಾಪಾರಿಗಳು
ದೇಶದಲ್ಲಿ ಹೆಚ್ಚಿನ ಸಂಖ್ಯೆಯ ಹಿಂದೂಗಳೂ ಗೋಮಾರಾಟ ಮಾಡುವ ವ್ಯಾಪಾರದಲ್ಲಿ ತೊಡಗಿದ್ದಾರೆ ಎಂದು ದೆಹಲಿ ಹೈಕೋರ್ಟ್ ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ...

ಆಗ್ರಾ: ದೇಶಾದ್ಯಂತ ಗೋಮಾಂಸ ಸೇವನೆ ಬಗ್ಗೆ ಹಲವು ವಿವಾದಗಳು ನಡೆಯುತ್ತಿರುವ ಬೆನ್ನಲ್ಲೇ, ದೆಹಲಿ ಹೈಕೋರ್ಟ್ ನ ನಿವೃತ್ತ ಮುಖ್ಯ ನ್ಯಾಯಮೂರ್ತಿಗಳು ನೀಡಿರುವ ಹೇಳಿಕೆ ಎಲ್ಲರ ಹುಬ್ಬೇರುವಂತೆ ಮಾಡಿದೆ.
ದೇಶದಲ್ಲಿ ಹೆಚ್ಚಿನ ಸಂಖ್ಯೆಯ ಹಿಂದೂಗಳೂ ಗೋಮಾರಾಟ ಮಾಡುವ ವ್ಯಾಪಾರದಲ್ಲಿ ತೊಡಗಿದ್ದಾರೆ ಎಂದು ದೆಹಲಿ ಹೈಕೋರ್ಟ್ ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ರಾಜೇಂದರ್ ಸಾಚಾರ್ ಹೇಳಿದ್ದಾರೆ.
ಮಥುರಾದ ಆರ್ ಸಿ ಪದವಿ ಕಾಲೇಜಿನಲ್ಲಿ ಏರ್ಪಡಿಸಿದ್ದ ಅಂತಾರಾಷ್ಟ್ರೀಯ ಮಟ್ಟದ ಸಮ್ಮೇಳನದಲ್ಲಿ ಮಾತನಾಡಿದ ಅವರು, ಮುಸ್ಲಿಮರಿಗಿಂತ ಹೆಚ್ಚು ಅಂದರೆ ಶೇ.95 ರಷ್ಟು ಗೋ ವ್ಯಾಪಾರಿಗಳು ಹಿಂದೂಗಳಾಗಿದ್ದಾರೆ ಎಂದರು.
ಈ ಸಮ್ಮೇಳನದಲ್ಲಿ ಕೆನಡಾ, ಆಫ್ಘಾನಿಸ್ತಾನ, ಬಾಂಗ್ಲಾದೇಶ ಸೇರಿದಂತೆ ಹಲವು ದೇಶಗಳ ವಿದ್ವಾಂಸರು ಪಾಲ್ಗೊಂಡಿದ್ದರು. ಇನ್ನು ರಾಜೇಂದರ್ ಸಾಚಾರ್ ಈ ಹೇಳಿಕೆ ವಿರೋಧಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಹಲವು ಶಿಕ್ಷಕರು ಸಮ್ಮೇಳನದಿಂದ ಹೊರ ನಡೆದು ಪ್ರತಿಭಟನೆ ನಡೆಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


