ದೇಶ

ಕಾಂಗ್ರೆಸ್‍ಗೆ ಐಎಸ್‍ಐ ನಂಟಿದೆ ಎಂದ ಬಾದಲ್

ಕಾಂಗ್ರೆಸ್ ರಾಷ್ಟ್ರವಿರೋಧಿ ಶಕ್ತಿಗಳು, ಉಗ್ರ ಸಂಘಟನೆಗಳ ಜತೆಗೆ ಕೈಜೋಡಿಸುತ್ತಿದೆ. ಹೀಗಾಗಿ ಆ ಪಕ್ಷದ ಮಾನ್ಯತೆ ರದ್ದು ಮಾಡಬೇಕೆಂದು ಪಂಜಾಬ್ ಉಪಮುಖ್ಯಮಂತ್ರಿ ಸುಖ್ ಬೀರ್ ಸಿಂಗ್ ಬಾದಲ್ ಒತ್ತಾಯಿಸಿದ್ದಾರೆ...

ಕಾಂಗ್ರೆಸ್‍ಗೆ ಐಎಸ್‍ಐ ನಂಟಿದೆ ಎಂದ ಬಾದಲ್
ಪಂಜಾಬ್ ಉಪಮುಖ್ಯಮಂತ್ರಿ ಸುಖ್ ಬೀರ್ ಸಿಂಗ್ ಬಾದಲ್ (ಸಂಗ್ರಹ ಚಿತ್ರ)
Published On :

ನವದೆಹಲಿ: ಕಾಂಗ್ರೆಸ್ ರಾಷ್ಟ್ರವಿರೋಧಿ ಶಕ್ತಿಗಳು, ಉಗ್ರ ಸಂಘಟನೆಗಳ ಜತೆಗೆ ಕೈಜೋಡಿಸುತ್ತಿದೆ. ಹೀಗಾಗಿ ಆ ಪಕ್ಷದ ಮಾನ್ಯತೆ ರದ್ದು ಮಾಡಬೇಕೆಂದು ಪಂಜಾಬ್ ಉಪಮುಖ್ಯಮಂತ್ರಿ ಸುಖ್ ಬೀರ್ ಸಿಂಗ್ ಬಾದಲ್ ಒತ್ತಾಯಿಸಿದ್ದಾರೆ.

80ರ ದಶಕದ ಭಯೋತ್ಪಾದನೆ, ಸಂಘರ್ಷದಲ್ಲಿ ಸಾವಿ ರಾರು ಪಂಜಾಬಿಗರು ಸಾವಿಗೀಡಾಗಿದ್ದಾರೆ. ಈಗ ಕಾಂಗ್ರೆಸ್ ಆ ವಾತಾವರಣ ಮರು ಸೃಷ್ಟಿಸಲು ಹೊರಟಿದೆ. ರಾಜಕೀಯ ಲಾಭಕ್ಕಾಗಿ ಪಾಕಿಸ್ತಾನದ ಐಎಸ್‍ಐ ಜತೆಗೆ ಸಂಪರ್ಕ ಹೊಂದಿ ರುವ ಉಗ್ರ ಸಂಘಟನೆಗಳನ್ನು ಬೆಂಬಲಿಸುತ್ತಿದೆ. ಕಾಂಗ್ರೆಸ್ ತನ್ನ ನಿಜ ಬಣ್ಣವನ್ನು ಪ್ರದರ್ಶಿಸುತ್ತಿದೆ.

ಅದೊಂದು ರಾಷ್ಟ್ರ ವಿರೋಧಿ ಪಕ್ಷ ಎಂದು ಬಾದಲ್ ಆರೋಪಿಸಿದ್ದಾರೆ. ಕಾಂಗ್ರೆಸ್ ಮುಖಂಡರು ಮೂಲಭೂತವಾದಿಗಳು ಹಾಗೂ ಪ್ರತ್ಯೇಕ ಖಾಲಿಸ್ತಾನಕ್ಕಾಗಿ ಹೋರಾಡುತ್ತಿರುವ ಪ್ರತ್ಯೇಕವಾದಿ ಗಳ ಜತೆಗೆ ವೇದಿಕೆ ಹಂಚಿಕೊಂಡಿದ್ದಾರೆ ಎಂದಿರುವ ಅವರು, ಈ ಕುರಿತ ವಿಡಿಯೋ ಬಿಡುಗಡೆ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.