ಗುಜರಾತ್ ನ ಆರು ಕ್ಷೇತ್ರಗಳಿಗೆ ಸ್ಥಳೀಯ ಸಂಸ್ಥೆ ಚುನಾವಣೆ
ಗುಜರಾತ್ ನ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯುತ್ತಿದ್ದು, 13 ಸಾವಿರ ಮತದಾನ ಕೇಂದ್ರಗಳಲ್ಲಿ ಇಂದು ಬೆಳಗ್ಗೆ...

ಅಹಮದಾಬಾದ್: ಗುಜರಾತ್ ನ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯುತ್ತಿದ್ದು, 13 ಸಾವಿರ ಮತದಾನ ಕೇಂದ್ರಗಳಲ್ಲಿ ಇಂದು ಬೆಳಗ್ಗೆ 8 ಗಂಟೆಗೆ ಮತದಾನ ಆರಂಭವಾಗಿದೆ.
ಗುಜರಾತ್ ನ ಅಹಮದಾಬಾದ್, ಸೂರತ್, ರಾಜ್ ಕೋಟ್, ವಡೋದರ, ಜಮ್ ನಗರ್ ಮತ್ತು ಭಾವನಗರ ನಗರಪಾಲಿಕೆ ಕ್ಷೇತ್ರಗಳಲ್ಲಿ ಚುನಾವಣೆ ನಡೆಯುತ್ತಿದೆ. ಈ ಕ್ಷೇತ್ರಗಳಲ್ಲೆಲ್ಲ ಬಿಜೆಪಿ ಈಗ ಆಡಳಿತದಲ್ಲಿದೆ.
ಮತದಾನ ಪ್ರಕ್ರಿಯೆ ಸುಗಮವಾಗಿ ಸಾಗಲು ರಾಜ್ಯ ಚುನಾವಣಾ ಆಯೋಗ ಸಕಲ ವ್ಯವಸ್ಥೆ ಮಾಡಿದೆ. ಭದ್ರತಾ ವ್ಯವಸ್ಥೆ ಮಾಡಲಾಗುತ್ತಿದೆ, ಪೊಲೀಸ್ ತುಕಡಿಗಳು, ಕೇಂದ್ರ ಮೀಸಲು ಭದ್ರತಾ ಪಡೆಯ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದು ರಾಜ್ಯ ಚುನಾವಣಾ ಆಯೋಗದ ಕಾರ್ಯದರ್ಶಿ ಮಹೇಶ್ ಜೋಶಿ ತಿಳಿಸಿದ್ದಾರೆ.
ಆರು ನಗರಪಾಲಿಕೆಗಳ 143 ವಾರ್ಡ್ ಗಳ 568 ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ ಸಾವಿರದ 856 ಅಭ್ಯರ್ಥಿಗಳು ಸ್ಪರ್ಧಾ ಕಣದಲ್ಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


