ಶೀನಾ ಬೋರಾ ಕೊಲೆಗೆ ಹಣಕಾಸಿನ ವ್ಯವಹಾರ ಕಾರಣ: ಕೋರ್ಟ್‌ಗೆ ಸಿಬಿಐ
ಶೀನಾ ಬೋರಾ ಕೊಲೆಗೆ ಹಣಕಾಸಿನ ವ್ಯವಹಾರ ಕಾರಣ ಎಂದು ಪ್ರಕರಣ ತನಿಖೆ ನಡೆಸುತ್ತಿರುವ ಸಿಬಿಐ ಸೋಮವಾರ ಕೋರ್ಟ್‌ಗೆ ತಿಳಿಸಿದೆ.

ಮುಂಬೈ: ಶೀನಾ ಬೋರಾ ಕೊಲೆಗೆ ಹಣಕಾಸಿನ ವ್ಯವಹಾರ ಕಾರಣ ಎಂದು ಪ್ರಕರಣ ತನಿಖೆ ನಡೆಸುತ್ತಿರುವ ಸಿಬಿಐ ಸೋಮವಾರ ಕೋರ್ಟ್‌ಗೆ ತಿಳಿಸಿದೆ.
ಹಣಕಾಸಿನ ವ್ಯವಹಾರದ ಕುರಿತು ತನಿಖೆ ನಡೆಸಲು ಪ್ರಕರಣದ ಪ್ರಮುಖ ಆರೋಪಿ ಇಂದ್ರಾಣಿ ಮುಖರ್ಜಿ ಪತಿ ಹಾಗೂ ಟಿವಿ ವಾಹಿನಿಯ ಮಾಜಿ ಕಾರ್ಯನಿರ್ವಾಹಕ ಅಧಿಕಾರಿ ಪೀಟರ್ ಮುಖರ್ಜಿಯನ್ನು ಮತ್ತೆ 10 ದಿನಗಳ ಕಾಲ ತಮ್ಮ ವಶಕ್ಕೆ ನೀಡುವಂತೆ ಸಿಬಿಐ ವಿಶೇಷ ಕೋರ್ಟ್‌ಗೆ ಮನವಿ ಮಾಡಿತು.
ಇಂದ್ರಾಣಿ ಮುಖರ್ಜಿ ಶೀನಾ ಬೋರಾ ಇಮೇಲ್ ಚೆಕ್ ಮಾಡುತ್ತಿದ್ದ ಸಂದರ್ಭದಲ್ಲಿ ಪೀಟರ್ ಮುಖರ್ಜಿ ಇರುತ್ತಿದ್ದರು. ಈ ಕೊಲೆಗೆ ಹಣಕಾಸಿನ ವ್ಯವಹಾರ ಪ್ರಮುಖ ಕಾರಣವಾಗಿದ್ದು, ಈ ಬಗ್ಗೆ ಹೆಚ್ಚಿನ ತನಿಖೆ ನಡೆಸುವ ಅಗತ್ಯವಿದೆ. ಹೀಗಾಗಿ ಪೀಟರ್ ಮುಖರ್ಜಿಯನ್ನು ಮತ್ತೆ 10ದಿನಗಳ ಕಾಲ ನಮ್ಮ ವಶಕ್ಕೆ ನೀಡವಂತೆ ಸಿಬಿಐ ಮನವಿ ಮಾಡಿತು. ಆದರೆ ಇದಕ್ಕೆ ಒಪ್ಪದ ಕೋರ್ಟ್ ಆರೋಪಿಯನ್ನು ಕೇವಲ 3 ದಿನಗಳ ಕಾಲ ಸಿಬಿಐ ವಶಕ್ಕೆ ನೀಡಿದೆ.
ಪೀಟರ್ ಮುಖರ್ಜಿ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದ ಸಿಬಿಐ ಕಳೆದ ಶುಕ್ರವಾರ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದೆ.
ಏಪ್ರಿಲ್, 2012ರಲ್ಲಿ ಕಣ್ಮರೆಯಾಗಿದ್ದ ಶೀನಾ ಬೋರಾಳ ಶವ ಮುಂಬೈನ ರಾಯ್ ಗಢ ಅರಣ್ಯದಲ್ಲಿ ಪತ್ತೆಯಾಗಿತ್ತು. ತಾಯಿ-ಮಗಳ ಮಧ್ಯೆ ಹಣಕಾಸಿನ ಭಿನ್ನಾಭಿಪ್ರಾಯದಿಂದ ಇಂದ್ರಾಣಿ ಶೀನಾ ಬೋರಾಳನ್ನು ಹತ್ಯೆ ಮಾಡಿರಬಹುದು ಎಂದು ಮೇಲ್ನೋಟಕ್ಕೆ ಕಂಡುಬಂದಿತ್ತು. ಈಗ ಅದು ನಿಜವಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


