ದೇಶ

ಮಣಿಪುರದಲ್ಲಿ ಖಾತೆ ತೆರೆದ ಬಿಜೆಪಿ: ಉಪಚುನಾವಣೆಯಲ್ಲಿ ಇಬ್ಬರು ಬಿಜೆಪಿ ಅಭ್ಯರ್ಥಿಗಳ ಜಯ

ಮಣಿಪುರದ ವಿಧಾನಸಭೆಯಲ್ಲಿ ಬಿಜೆಪಿ ಖಾತೆ ತೆರೆದಿದೆ. ಮಣಿಪುರ ವಿಧಾನಸಭೆಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಇಬ್ಬರು ಸದಸ್ಯರು ಚುನಾಯಿತರಾಗಿದ್ದಾರೆ.

ಮಣಿಪುರದಲ್ಲಿ ಖಾತೆ ತೆರೆದ ಬಿಜೆಪಿ: ಉಪಚುನಾವಣೆಯಲ್ಲಿ ಇಬ್ಬರು ಬಿಜೆಪಿ ಅಭ್ಯರ್ಥಿಗಳ ಜಯ
ಬಿಜೆಪಿ
Published On :

ಇಂಫಾಲ: ಮಣಿಪುರದ ವಿಧಾನಸಭೆಯಲ್ಲಿ ಬಿಜೆಪಿ ಖಾತೆ ತೆರೆದಿದೆ. ಮಣಿಪುರ ವಿಧಾನಸಭೆಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಇಬ್ಬರು ಸದಸ್ಯರು ಚುನಾಯಿತರಾಗಿದ್ದಾರೆ. 
ನವೆಂಬರ್ 21 ರಂದು ಮಣಿಪುರದ ಥೋಂಗ್ಜು ಹಾಗೂ ಥಂಗ್ಮೈಬಂದ್ ವಿಧಾನಸಭಾ ಕ್ಷೇತ್ರಗಳಿಂದ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿಗಳಾದ ಥೋಂಗಮ್ ಬಿಸ್ವಜಿತ್ ಸಿಂಗ್ ಹಾಗೂ ಖುಮುಕ್ಚಂ ಜೈಕಿಶನ್ ವಿಧಾನಸಭೆಗೆ ಆಯ್ಕೆಗೊಂಡಿದ್ದಾರೆ.
ಮಣಿಪುರದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದು, ಕಾಂಗ್ರೆಸ್ ಅಭ್ಯರ್ಥಿಗಳ ವಿರುದ್ಧ ಬಿಜೆಪಿ ಅಭ್ಯರ್ಥಿಗಳು ಜಯಗಳಿಸಿದ್ದಾರೆ.
ಈ ಹಿಂದೆ ತೃಣಮೂಲ ಕಾಂಗ್ರೆಸ್ಸಿಗರಾಗಿದ್ದ ಆಯ್ಕೆಯಾಗಿರುವ ಸದಸ್ಯರನ್ನು ಮಣಿಪುರ ವಿಧಾನಸಭಾ ಸ್ಪೀಕರ್ ಪಕ್ಷಾಂತರ ವಿರೋಧಿ ಕಾಯ್ದೆಯಡಿ ಮೇ ನಲ್ಲಿ ಅನರ್ಹಗೊಳಿಸಿದ್ದರು. ಈ ಹಿನ್ನೆಲೆಯಲ್ಲಿ ಎರಡು ಕ್ಷೇತ್ರಗಳಿಗೆ ಮತ್ತೊಮ್ಮೆ ಚುನಾವಣೆ ನಡೆದಿತ್ತು.
ಬಿಜೆಪಿಯಿಂದ ಸ್ಪರ್ಧಿಸಿದ್ದ ಅಭ್ಯರ್ಥಿಗಳು ಕಾಂಗ್ರೆಸ್ ಅಭ್ಯರ್ಥಿಗಳ ವಿರುದ್ಧ ಗೆಲುವು ಸಾಧಿಸಿರುವುದು ಮಹತ್ವದ ಬೆಳವಣಿಗೆಯಾಗಿದ್ದು ಮಣಿಪುರದ ಜನತೆ ಕಾಂಗ್ರೆಸ್ಸನ್ನು ತಿರಸ್ಕರಿಸಿರುವುದು ಸ್ಪಷ್ಟವಾಗಿದೆ ಎಂದು ಮಣಿಪುರ ಬಿಜೆಪಿ ಅಧ್ಯಕ್ಷ ಚಾವೋಬಾ ಸಿಂಗ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.