ದೇಶ

ಒಡಿಶಾ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ: ಐವರಿಗೆ ಮರಣದಂಡನೆ ಶಿಕ್ಷೆ

ಒಡಿಶಾದ ಕಿಯೋಂಝಾರ್ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ಸ್ಥಳೀಯ ನ್ಯಾಯಾಲಯವೊಂದು ಐವರು ಅಪರಾಧಿಗಳಿಗೆ ಮಂಗಳವಾರ ಮರಣದಂಡನೆ ಶಿಕ್ಷೆಯನ್ನು...

ಒಡಿಶಾ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ: ಐವರಿಗೆ ಮರಣದಂಡನೆ ಶಿಕ್ಷೆ
(ಸಾಂದರ್ಭಿಕ ಚಿತ್ರ)
Published On :

ನವದೆಹಲಿ: ಒಡಿಶಾದ ಕಿಯೋಂಝಾರ್ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ಸ್ಥಳೀಯ ನ್ಯಾಯಾಲಯವೊಂದು ಐವರು ಅಪರಾಧಿಗಳಿಗೆ ಮಂಗಳವಾರ ಮರಣದಂಡನೆ ಶಿಕ್ಷೆಯನ್ನು ನೀಡಿದೆ.

ಒಡಿಶಾದ ಬೆಕ್ಲುಂಡಿ ಗ್ರಾಮಕ್ಕೆ ಸೇರಿದ ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ 2012ರಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಿ ನಂತರ ಆಕೆಯನ್ನು ಹತ್ಯೆ ಮಾಡಲಾಗಿತ್ತು.. ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವಿಚಾರಣೆ ನಡೆಸಿದ ಸ್ಥಳೀಯ ನ್ಯಾಯಾಲಯವು ಪ್ರಕರಣಕ್ಕೆ ಸಂಬಂಧಿಸಿದಂತೆ ಐವರೂ ಆರೋಪಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಿದೆ ಎಂದು ತಿಳಿದುಬಂದಿದೆ.  

ಮಚಾ ಮುಂಡಾ, ಮಂಗಲ್ ಪ್ರುಸ್ಟಿ, ಜಿತೇನ್ ಮುಂಡಾ, ಹರ್ಜಿತ್ ಸಿಂಗ್ ಹಾಗೂ ಬಿಸ್ವಾನಾಥ್ ಮುಂಡಾ ಶಿಕ್ಷೆಗೊಳಗಾದ ಅಪರಾಧಿಗಳಾಗಿದ್ದಾರೆ.

2012ರಲ್ಲಿ ಘಟನೆ ನಡೆದಿತ್ತು. ಅತ್ಯಾಚಾರಕ್ಕೊಳಗಾಗಿ ಹತ್ಯೆಯಾದ ಬಾಲಕಿ ಬಾರ್ಬಿಲ್ ನಲ್ಲಿರುವ ಶಾಲೆಯೊಂದರಲ್ಲಿ 8ನೇ ತರಗತಿ ವ್ಯಾಸಾಂಗ ಮಾಡುತ್ತಿದ್ದಳು. ಟ್ಯೂಷನ್ ಗೆಂದು ಹೋಗಿದ್ದ ಬಾಲಕಿ ಎಷ್ಟು ಹೊತ್ತಾದರೂ ಮನೆಗೆ ಬಂದಿರಲಿಲ್ಲ. ಇದರಿಂದಾಗಿ ಗಾಬರಿಗೊಂಡಿದ್ದ ಬಾಲಕಿಯ ಕುಟುಂಬಸ್ಥರು ಬಾಲಕಿಗಾಗಿ ಹುಡುಕಾಟ ಆರಂಭಿಸಿದ್ದರು. ಈ ವೇಳೆ ಬಾಲಕಿ ದೇಹ ತೀವ್ರವಾಗಿ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.