ದೇಶ

ನಾನು ಬಿಜೆಪಿಯಲ್ಲೇ ಮುಂದುವರೆಯುತ್ತೇನೆ: ಕಲಾಂ ಸಂಬಂಧಿ

ಬಿಜೆಪಿಗೆ ರಾಜಿನಾಮೆ ನೀಡಿದ್ದಾರೆ ಎಂಬ ವರದಿಯನ್ನು ತಳ್ಳಿಹಾಕಿರುವ ಕಲಾಂ ಅವರ ಸಂಬಂಧಿ ಎ.ಪಿ.ಜೆ.ಎಂ.ಜೆ ಶೇಕ್ ಸಲೀಂ ಅವರು, ತಾವು ಬಿಜೆಪಿಯಲ್ಲೇ...

ನಾನು ಬಿಜೆಪಿಯಲ್ಲೇ ಮುಂದುವರೆಯುತ್ತೇನೆ: ಕಲಾಂ ಸಂಬಂಧಿ
ಮಾಜಿ ರಾಷ್ಟ್ರಪತಿ ದಿ. ಡಾ.ಎ.ಪಿ.ಜೆ. ಅಬ್ದುಲ್ ಕಲಾಂ
Published On :

ರಾಮೇಶ್ವರಂ: ಬಿಜೆಪಿಗೆ ರಾಜಿನಾಮೆ ನೀಡಿದ್ದಾರೆ ಎಂಬ ವರದಿಯನ್ನು ತಳ್ಳಿಹಾಕಿರುವ ಕಲಾಂ ಅವರ ಸಂಬಂಧಿ ಎ.ಪಿ.ಜೆ.ಎಂ.ಜೆ ಶೇಕ್ ಸಲೀಂ ಅವರು, ತಾವು ಬಿಜೆಪಿಯಲ್ಲೇ ಮುಂದುವರೆಯುವುದಾಗಿ ಮಂಗಳವಾರ ಹೇಳಿದ್ದಾರೆ.

ಕೆಲವು ಮಾಧ್ಯಮಗಳು ತಪ್ಪಾಗಿ ವರದಿ ಮಾಡಿವೆ. ನಾನು ರಾಜಿನಾಮೆ ನೀಡಿಲ್ಲ. ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತನಾಗಿದ್ದು, ಬಿಜೆಪಿಯಲ್ಲೇ ಮುಂದುವರೆಯುತ್ತೇನೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

'ನನ್ನ ರಾಜಿನಾಮೆ ಬಗ್ಗೆ ಮಾಧ್ಯಮಗಳು ತಪ್ಪಾಗಿ ವರದಿ ಮಾಡಿವೆ ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಕಚೇರಿಗೆ ತಿಳಿಸಿದ್ದೇನೆ' ಎಂದು ಸಲೀಂ ಹೇಳಿದ್ದಾರೆ.

'ನಾನು ಎರಡು ತಿಂಗಳ ಹಿಂದಷ್ಟೇ ಬಿಜೆಪಿ ಸೇರಿದ್ದೇನೆ ಮತ್ತು ಯಾವುದೇ ಪ್ರಚಾರ ಬಯಸದೇ ನಾನು ನನ್ನ ಕೆಲಸ ಮಾಡುತ್ತಿದೇನೆ' ಎಂದು ತಿಳಿಸಿದ್ದಾರೆ.

ನಿನ್ನೆಯಷ್ಟೇ ಕೇಂದ್ರ ಸರ್ಕಾರ ಮಾಜಿ ರಾಷ್ಟ್ರಪತಿ ದಿ. ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ಅವರ ದೆಹಲಿಯ ನಿವಾಸವನ್ನು ಜ್ಞಾನಕೇಂದ್ರವಾಗಿ ಪರಿವರ್ತಿಸಲು ವಿಫಲವಾಗಿದೆ ಎಂದು ಆರೋಪಿಸಿ ಕಲಾಂ ಅವರ ಮತ್ತೊಬ್ಬ ಎಪಿಜೆ ಸಯೀದ್ ಹಜ ಇಬ್ರಾಹಿಂ ಅವರು ತಮಿಳುನಾಡು ಬಿಜೆಪಿ ಅಲ್ಪ ಸಂಖ್ಯಾತ ಘಟಕದ ಉಪಾಧ್ಯಕ್ಷ ಸ್ಥಾನಕ್ಕೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.