ಅವಹೇಳನಕಾರಿ ಹೇಳಿಕೆ: ಬಿಜೆಪಿ ಶಾಸಕನ ಮನೆ ಮುಂದೆ ಆಪ್ ಪ್ರತಿಭಟನೆ
ಆಮ್ ಆದ್ಮಿ ಪಕ್ಷದ ಶಾಸಕಿ ಅಲ್ಕಾ ಲಂಬಾ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಓಂ ಪ್ರಕಾಶ್ ಶರ್ಮಾ ಮನೆ ಮುಂದೆ ಆಪ್ ಶಾಸಕರು ಬುಧವಾರ ಪ್ರತಿಭಟನೆ ನಡೆಸುತ್ತಿದ್ದಾರೆ...

ನವದೆಹಲಿ: ಆಮ್ ಆದ್ಮಿ ಪಕ್ಷದ ಶಾಸಕಿ ಅಲ್ಕಾ ಲಂಬಾ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಓಂ ಪ್ರಕಾಶ್ ಶರ್ಮಾ ಮನೆ ಮುಂದೆ ಆಪ್ ಶಾಸಕರು ಬುಧವಾರ ಪ್ರತಿಭಟನೆ ನಡೆಸುತ್ತಿದ್ದಾರೆ.
ಶಾಸಕಿ ಅಲ್ಕಾ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕನ್ನು ಶಾಶ್ವತವಾಗಿ ಅಮಾನತುಗೊಳಿಸಬೇಕೆಂದು ಆಗ್ರಹಿಸಿ ಆಮ್ ಆದ್ಮಿ ಪಕ್ಷದ ನಾಯಕರು ಬಿಜೆಪಿ ಶಾಸಕನ ಮನೆಯ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.
ಆಪ್ ಪ್ರತಿಭಟನೆಗೆ ಈಗಾಗಲೇ ಹಲವು ಮಹಿಳೆಯರು ಕೈಜೋಡಿಸಿದ್ದು, ಬಿಜೆಪಿ ಶಾಸಕ ತಮ್ಮ ಹೇಳಿಕೆಯಿಂದ ಮಹಿಳೆಯರಿಗೆ ಅವಮಾನ ಮಾಡಿದ್ದು, ಇದನ್ನು ನಾವು ಸಹಿಸುವುದಿಲ್ಲ ಎಂದು ಘೋಷಣೆ ಕೂಗುತ್ತಿದ್ದಾರೆ.
ಆಪ್ ಶಾಸಕಿ ಅಲ್ಕಾ ಲಂಬಾ ವಿರುದ್ಧ ಬಿಜೆಪಿ ಶಾಸಕ ಓಂ ಪ್ರಕಾಶ್ ಶರ್ಮಾ ನೀಡಿದ್ದ ಅವಹೇಳಕಾರಿ ಹೇಳಿಕೆ ವಿರುದ್ಧ ನಿನ್ನೆಯಷ್ಟೇ ಕ್ರಮಕೈಗೊಂಡಿದ್ದ ಸ್ಪೀಕರ್ ರಾಮ್ನಿವಾಸ್ ಗೋಯೆಲ್ ಅವರು ಶರ್ಮಾ ಅವರನ್ನು ಎರಡು ದಿನಗಳ ಅಮಾನತು ಮಾಡಿದ್ದರು.
ಮಹಿಳಾ ಶಾಸಕಿ ವಿರುದ್ಧ ನೀಡಿದ್ದ ಹೇಳಿಕೆಗೆ ಅಮಾನತು ಶಿಕ್ಷೆ ಸರಿಯಾದ ಕ್ರಮವಲ್ಲ. ಶಾಸಕ ವಿರುದ್ಧ ಮತ್ತಷ್ಟು ಕಠಿಣ ಕ್ರಮ ಗೊಳ್ಳಬೇಕು ಎಂದು ಆಮ್ ಆದ್ಮಿ ಪಕ್ಷ ಮಹಿಳಾ ಕಾರ್ಯಕರ್ತೆಯೊಬ್ಬರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


