ದೇಶ

ಅಸಹಿಷ್ಣುತೆ ಹೇಳಿಕೆ: ಅಮಿರ್ ಖಾನ್ ಬೆಂಬಲಕ್ಕೆ ನಿಂತ ಮುಲಾಯಂ

ದೇಶದಾದ್ಯಂತ ತೀವ್ರ ಚರ್ಚೆ ಹಾಗೂ ವಿರೋಧಕ್ಕೆ ಕಾರಣವಾಗಿರುವ ನಟ ಅಮಿರ್ ಖಾನ್ ಅವರ ಅಸಹಿಷ್ಣುತೆ ಹೇಳಿಕೆಯನ್ನು ಬೆಂಬಲಿಸಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಪ್ರತಿಯೊಬ್ಬರಿಗೂ ಅವರವರ ಅಭಿಪ್ರಾಯ ವ್ಯಕ್ತಪಡಿಸುವ ಹಕ್ಕಿದೆ ಎಂದು ಬುಧವಾರ ಹೇಳಿದ್ದಾರೆ...

ಅಸಹಿಷ್ಣುತೆ ಹೇಳಿಕೆ: ಅಮಿರ್ ಖಾನ್ ಬೆಂಬಲಕ್ಕೆ ನಿಂತ ಮುಲಾಯಂ
ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ (ಸಂಗ್ರಹ ಚಿತ್ರ)
Published On :

ನವದೆಹಲಿ: ದೇಶದಾದ್ಯಂತ ತೀವ್ರ ಚರ್ಚೆ ಹಾಗೂ ವಿರೋಧಕ್ಕೆ ಕಾರಣವಾಗಿರುವ ನಟ ಅಮಿರ್ ಖಾನ್ ಅವರ ಅಸಹಿಷ್ಣುತೆ ಹೇಳಿಕೆಯನ್ನು ಬೆಂಬಲಿಸಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಪ್ರತಿಯೊಬ್ಬರಿಗೂ ಅವರವರ ಅಭಿಪ್ರಾಯ ವ್ಯಕ್ತಪಡಿಸುವ ಹಕ್ಕಿದೆ ಎಂದು ಬುಧವಾರ ಹೇಳಿದ್ದಾರೆ.

ನಟ ಅಮಿರ್ ಖಾನ್ ಅವರ ಅಸಹಿಷ್ಣುತೆ ಹೇಳಿಕೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಯಾವುದೋ ವಿಷಯದಲ್ಲಿ ನೋವಿನಲ್ಲಿದ್ದರೇನೋ ಹೀಗಾಗಿ ಈ ರೀತಿಯ ಹೇಳಿಕೆ ನೀಡಿದ್ದಾರೆ. ಅಭಿಪ್ರಾಯ ವ್ಯಕ್ತಪಡಿಸುವ ಹಕ್ಕು ಪ್ರತಿಯೊಬ್ಬರಿಗೂ ಇದೆ. ಅಮಿರ್ ಖಾನ್ ಒಬ್ಬ ದೊಡ್ಡ. ಹೇಳಿಕೆ ಕುರಿತಂತೆ ಸರ್ಕಾರ ಅವರೊಂದಿಗೆ ಮಾತನಾಡುವ ಅಗತ್ಯವಿದ್ದು, ಅವರ ಭಾವನೆಗಳನ್ನು ಅರ್ಥಮಾಡಿಕೊಳ್ಳುವ ಅಗತ್ಯವಿದೆ ಎಂದು ಹೇಳಿದ್ದಾರೆ.

ಮುಲಾಯಂ ಸಿಂಗ್ ಅವರ ಈ ಹೇಳಿಕೆ ಇದೀಗ ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದ್ದು, ನಾಳೆ ನಡೆಯುವ ಚಳಿಗಾಲ ಅಧಿವೇಶನದಲ್ಲಿ ಅಸಹಿಷ್ಣುತೆ ಕುರಿತಂತೆ ಸಂಸತ್ತಿನಲ್ಲಿ ಗದ್ದಲವೇರ್ಪಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಅಸಹಿಷ್ಣುತೆ ಚರ್ಚೆ ಕುರಿತಂತೆ ಈಗಾಗಲೇ ಪ್ರತಿಕ್ರಿಯೆ ನೀಡಿರುವ ಕೇಂದ್ರವು ಈ ಕುರಿತಂತೆ ಚರ್ಚೆ ನಡೆಸಲು ತಯಾರಿದ್ದೇವೆಂದು ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.