ದೇಶ

ದೇಶದ ಜನತೆಗೆ ಗುರುನಾನಕ್ ಜಯಂತಿ ಶುಭಾಶಯ ಕೋರಿದ ಪ್ರಧಾನಿ

ಗುರುನಾನಕ್‌ ಜಯಂತಿಯಾದ ಇಂದು ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ. ಜೊತೆಗೆ ಸಾಮರಸ್ಯ ಹಾಗೂ ಸಹಾನುಭೂತಿಯ ...

ದೇಶದ ಜನತೆಗೆ ಗುರುನಾನಕ್ ಜಯಂತಿ ಶುಭಾಶಯ ಕೋರಿದ ಪ್ರಧಾನಿ
ಗುರು ನಾನಕ್ ಮತ್ತು ಪ್ರಧಾನಿ ನರೇಂದ್ರ ಮೋದಿ
Published On :

ನವದೆಹಲಿ:  ಗುರುನಾನಕ್‌ ಜಯಂತಿಯಾದ ಇಂದು ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ. ಜೊತೆಗೆ ಸಾಮರಸ್ಯ ಹಾಗೂ ಸಹಾನುಭೂತಿಯ ಸಂದೇಶವನ್ನು ಮೋದಿ ಒತ್ತಿ ಹೇಳಿದ್ದಾರೆ.

"ಗುರುನಾನಕ್‌ ಜಯಂತಿಯ ಈ ಶುಭ ದಿನದಂದು ದೇಶದ ಪ್ರತಿಯೋರ್ವರಿಗೂ ನನ್ನ ಶುಭ ಹಾರೈಕೆಗಳು. ನಿಸ್ವಾರ್ತ ಸೇವೆ, ಸಹಾನುಭೂತಿ ಮತ್ತು ಸಾಮರಸ್ಯದ ಗುರುನಾನಕ್‌ ದೇವ್‌ ಅವರ ಸಂದೇಶ ನಮ್ಮೆಲ್ಲರಿಗೂ ಚಿರಕಾಲ ಸ್ಫೂರ್ತಿದಾಯಕವಾಗಲಿ' ಎಂದು ಮೋದಿ ಟ್ವೀಟ್‌ ಮಾಡಿದ್ದಾರೆ.

ದೇಶದಲ್ಲಿ ಅಸಹನೆ, ಅಸಹಿಷ್ಣುತೆ ಹೆಚ್ಚುತ್ತಿದೆ ಎಂಬ ಬಗ್ಗೆ ನಡೆಯುತ್ತಿರುವ ಚರ್ಚೆಯನ್ನು ಇನ್ನಷ್ಟು ತೀವ್ರಗೊಳಿಸಿರುವ ಬಾಲಿವುಡ್‌ ನಟ ಆಮಿರ್‌ ಖಾನ್‌ ಅವರ ಹೇಳಿಕೆಯ ಹಿನ್ನೆಲೆಯಲ್ಲಿ ಮೋದಿ ಅವರ ಸಾಮರಸ್ಯ ಮತ್ತು ಸಹಿಷ್ಣುತೆಯ ಸಂದೇಶ ಮಹತ್ವವನ್ನು ಪಡೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.