ದೇಶ

ಶೀನಾ ಹತ್ಯೆ ಪ್ರಕರಣ: ಪೀಟರ್ ಮುಖರ್ಜಿಗೆ 4 ದಿನ ಸಿಬಿಐ ಬಂಧನ

ಶೀನಾ ಬೋರಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ನಿಂದ ಬಂಧನಕ್ಕೊಳಗಾಗಿದ್ದ ಇಂದ್ರಾಣಿ ಮುಖರ್ಜಿಯವರ ಪತಿ ಪೀಟರ್ ಮುಖರ್ಜಿಯವರನ್ನು ಸಿಬಿಐ ವಿಶೇಷ ನ್ಯಾಯಾಲಯವು ಮತ್ತೆ 4 ದಿನಗಳ ಸಿಬಿಐ ಬಂಧನಕ್ಕೆ ಆದೇಶಿಸಿದೆ...

ಶೀನಾ ಹತ್ಯೆ ಪ್ರಕರಣ: ಪೀಟರ್ ಮುಖರ್ಜಿಗೆ 4 ದಿನ ಸಿಬಿಐ ಬಂಧನ
ಶೀನಾ ಹತ್ಯೆ ಪ್ರಕರಣ: ಪೀಟರ್ ಮುಖರ್ಜಿಗೆ 4 ದಿನ ಸಿಬಿಐ ಬಂಧನ
Published On :

ಮುಂಬೈ: ಶೀನಾ ಬೋರಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ನಿಂದ ಬಂಧನಕ್ಕೊಳಗಾಗಿದ್ದ ಇಂದ್ರಾಣಿ ಮುಖರ್ಜಿಯವರ ಪತಿ ಪೀಟರ್ ಮುಖರ್ಜಿಯವರನ್ನು ಸಿಬಿಐ ವಿಶೇಷ ನ್ಯಾಯಾಲಯವು ಮತ್ತೆ 4 ದಿನಗಳ ಕಾಲ ಸಿಬಿಐ ಬಂಧನಕ್ಕೆ ಆದೇಶಿಸಿದೆ.

ಸಿಬಿಐ ಬಂಧನ ಅವಧಿ ಇಂದಿಗೆ ಅಂತ್ಯಗೊಂಡ ಹಿನ್ನೆಲೆಯಲ್ಲಿ ಸಿಬಿಐ ಅಥಿಕಾರಿಗಳು ಇಂದು ಪೀಟರ್ ಮುಖರ್ಜಿಯವರನ್ನು ಮುಂಬೈನ ಸಿಬಿಐ ವಿಶೇಷ ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದರು. ಅಲ್ಲದೆ, ಪ್ರಕರಣ ಸಂಬಂಧ ಪೀಟರ್ ಮುಖರ್ಜಿಯನ್ನು ತನಿಖೆ ನಡೆಸಲು ಮತ್ತಷ್ಟು ಅವಕಾಶಬೇಕಿದ್ದು ಪೀಟರ್ ಅವರ ಬಂಧನವನ್ನು ವಿಸ್ತರಿಸುವಂತೆ ನ್ಯಾಯಾಲಯದ ಬಳಿ ಮನವಿ ಮಾಡಿಕೊಂಡಿತ್ತು.

ಈ ಬಗ್ಗೆ ವಿಚಾರಣೆ ನಡೆಸಿದ ವಿಶೇಷ ಸಿಬಿಐ ನ್ಯಾಯಾಲಯವು ಮತ್ತೆ ಪೀಟರ್ ಮುಖರ್ಜಿಯವರಿಗೆ ನವೆಂಬರ್ 30ರವರೆಗೆ ಸಿಬಿಐ ಬಂಧನವನ್ನು ವಿಧಿಸಿದೆ.
ಶೀನಾ ಬೋರಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೀಟರ್ ಮುಖರ್ಜಿ ಅವರ ಪಾತ್ರವಿರುವಂತೆ ಹಲವು ಶಂಕೆಗಳು ವ್ಯಕ್ತವಾಗಿದ್ದವು. ತನಿಖೆ ವೇಳೆ ಪೀಟರ್ ಮುಖರ್ಜಿಯವರು ಹೇಳಿಕೆ ನೀಡುವಲ್ಲಿ ಸಾಕಷ್ಟು ಗೊಂದಲ ಸೃಷ್ಟಿಸಿರುವುದು ತಿಳಿದುಬಂದಿತ್ತು. ಈ ಹಿನ್ನೆಲೆಯಲ್ಲಿ ವಿಶೇಷ ತನಿಖಾಧಿಕಾರಿಗಳು ಪೀಟರ್ ಮುಖರ್ಜಿಯವರನ್ನು ಶುಕ್ರವಾರ ಬಂಧನಕ್ಕೊಳಪಡಿಸಿದ್ದರು.

ಏಪ್ರಿಲ್, 2012ರಲ್ಲಿ ಕಣ್ಮರೆಯಾಗಿದ್ದ ಶೀನಾ ಬೋರಾಳ ದೇಹ ಮುಂಬೈನ ರಾಯ್ ಗಢ ಅರಣ್ಯದಲ್ಲಿ ಪತ್ತೆಯಾಗಿತ್ತು. ಶೀನಾ ಹತ್ಯೆಗೆ ತಾಯಿ-ಮಗಳ ಮಧ್ಯೆ ಇರುವ ಹಣಕಾಸಿನ ಭಿನ್ನಾಭಿಪ್ರಾಯದಿಂದ ಇಂದ್ರಾಣಿ ಶೀನಾ ಬೋರಾಳನ್ನು ಹತ್ಯೆ ಮಾಡಿದ್ದಾರೆಂದು ಹೇಳಲಾಗುತ್ತಿತ್ತು. ಪ್ರಕರಣ ಸಂಬಂಧ ತನಿಖೆ ನಡೆಸಿದ ಅಧಿಕಾರಿಗಳು ಶೀನಾ ಹತ್ಯೆಗೆ ಹಣಕಾಸಿನ ವ್ಯವಹಾರವೇ ಕಾರಣ ಎಂದು ನ್ಯಾಯಾಲಯಕ್ಕೆ ತಿಳಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.