ದೇಶ

ಶೀನಾ ಪ್ರಕರಣ: ಪೀಟರ್'ನ್ನು ಮುಂಬೈಗೆ ಕರೆತಂದ ಅಧಿಕಾರಿಗಳು

ಶೀನಾ ಬೋರಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಗಳು ಇಂದ್ರಾಣಿ ಮುಖರ್ಜಿ ಅವರ ಪತಿ ಪೀಟರ್‌ಮುಖರ್ಜಿಯವರನ್ನು ಮುಂಬೈಗೆ ಕರೆತಂದಿದ್ದಾರೆಂದು ಗುರುವಾರ ತಿಳಿದುಬಂದಿದೆ...

ಶೀನಾ ಪ್ರಕರಣ: ಪೀಟರ್'ನ್ನು ಮುಂಬೈಗೆ ಕರೆತಂದ ಅಧಿಕಾರಿಗಳು
ಶೀನಾ ಬೋರಾ (ಸಂಗ್ರಹ ಚಿತ್ರ)
Published On :

ಮುಂಬೈ: ಶೀನಾ ಬೋರಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಗಳು ಇಂದ್ರಾಣಿ ಮುಖರ್ಜಿ ಅವರ ಪತಿ ಪೀಟರ್‌ಮುಖರ್ಜಿಯವರನ್ನು ಮುಂಬೈಗೆ ಕರೆತಂದಿದ್ದಾರೆಂದು ಗುರುವಾರ ತಿಳಿದುಬಂದಿದೆ.

ಕಳೆದೆರಡು ದಿನಗಳ ಹಿಂದಷ್ಟೇ ಸಿಬಿಐ ಅಧಿಕಾರಿಗಳು ಪೀಟರ್ ಮುಖರ್ಜಿಯವರನ್ನು ವಿಚಾರಣೆಗಾಗಿ ನವದೆಹಲಿಗೆ ಕರೆತಂದಿದ್ದರು. ಇದೀಗ ಅಧಿಕಾರಿಗಳು ಪೀಟರ್ ಅವರನ್ನು ಮುಂಬೈಗೆ ಕರೆತಂದಿದ್ದಾರೆಂದು ತಿಳಿದುಬಂದಿದೆ. ಅಲ್ಲದೆ, ಪ್ರಕರಣ ಸಂಬಂಧ ಅಧಿಕಾರಿಗಳು ಪೀಟರ್ ಅವರನ್ನು ಇಂದು ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದು, ಮತ್ತಷ್ಟು ವಿಚಾರಣೆ ನಡೆಸಲು ಪೀಟರ್ ಅವರ ನ್ಯಾಯಾಂಗ ಬಂಧನವನ್ನು ವಿಸ್ತರಿಸುವಂತೆ ಕಾಲಾವಕಾಶ ಕೇಳುವ ಅವಕಾಶಗಳಿದೆ ಎಂದು ಹೇಳಲಾಗುತ್ತಿದೆ.

ಶೀನಾ ಬೋರಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೀಟರ್ ಮುಖರ್ಜಿ ಅವರ ಪಾತ್ರವಿರುವಂತೆ ಹಲವು ಶಂಕೆಗಳು ವ್ಯಕ್ತವಾಗಿದ್ದವು. ತನಿಖೆ ವೇಳೆ ಪೀಟರ್ ಮುಖರ್ಜಿಯವರು ಹೇಳಿಕೆ ನೀಡುವಲ್ಲಿ ಸಾಕಷ್ಟು ಗೊಂದಲ ಸೃಷ್ಟಿಸಿರುವುದು ತಿಳಿದುಬಂದಿತ್ತು. ಈ ಹಿನ್ನೆಲೆಯಲ್ಲಿ ವಿಶೇಷ ತನಿಖಾಧಿಕಾರಿಗಳು ಪೀಟರ್ ಮುಖರ್ಜಿಯವರನ್ನು ಶುಕ್ರವಾರ ಬಂಧನಕ್ಕೊಳಪಡಿಸಿದ್ದರು.

ಏಪ್ರಿಲ್, 2012ರಲ್ಲಿ ಕಣ್ಮರೆಯಾಗಿದ್ದ ಶೀನಾ ಬೋರಾಳ ದೇಹ ಮುಂಬೈನ ರಾಯ್ ಗಢ ಅರಣ್ಯದಲ್ಲಿ ಪತ್ತೆಯಾಗಿತ್ತು. ಶೀನಾ ಹತ್ಯೆಗೆ ತಾಯಿ-ಮಗಳ ಮಧ್ಯೆ ಇರುವ ಹಣಕಾಸಿನ ಭಿನ್ನಾಭಿಪ್ರಾಯದಿಂದ ಇಂದ್ರಾಣಿ ಶೀನಾ ಬೋರಾಳನ್ನು ಹತ್ಯೆ ಮಾಡಿದ್ದಾರೆಂದು ಹೇಳಲಾಗುತ್ತಿತ್ತು. ಪ್ರಕರಣ ಸಂಬಂಧ ತನಿಖೆ ನಡೆಸಿದ ಅಧಿಕಾರಿಗಳು ಶೀನಾ ಹತ್ಯೆಗೆ ಹಣಕಾಸಿನ ವ್ಯವಹಾರವೇ ಕಾರಣ ಎಂದು ನ್ಯಾಯಾಲಯಕ್ಕೆ ತಿಳಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.