ಇ ತ್ಯಾಜ್ಯ ವಿವರ ಕೇಳಿದ ಕೋರ್ಟ್
ನಿಯಮಗಳ ಪ್ರಕಾರ ಇ ತ್ಯಾಜ್ಯ ನಿರ್ವಹಣೆ ನಡೆಯುತ್ತಿಲ್ಲ ಎಂಬ ದೂರಿನ ವಿಚಾರಣೆ ನಡೆಸುತ್ತಿರುವ ರಾಷ್ಟ್ರೀಯ ಹಸಿರು...

Published On :
ನವದೆಹಲಿ: ನಿಯಮಗಳ ಪ್ರಕಾರ ಇ ತ್ಯಾಜ್ಯ ನಿರ್ವಹಣೆ ನಡೆಯುತ್ತಿಲ್ಲ ಎಂಬ ದೂರಿನ ವಿಚಾರಣೆ ನಡೆಸುತ್ತಿರುವ ರಾಷ್ಟ್ರೀಯ ಹಸಿರು ಪೀಠ, ಇ ತ್ಯಾಜ್ಯ ಉತ್ಪಾದನೆ, ಪುನರ್‍ಬಳಕೆ ಮತ್ತು ವಿಲೇವಾರಿ ಕುರಿತು ಸಂಪೂರ್ಣ ವರದಿ ಸಲ್ಲಿಸುವಂತೆ ಎಲ್ಲಾ ರಾಜ್ಯಗಳ ಮಾಲಿನ್ಯ ನಿಯಂತ್ರಣ ಮಂಡಳಿಗಳಿಗೆ (ಎಸ್‍ಪಿಸಿಬಿ) ಸೂಚಿಸಿದೆ.
ದೂರಿನ ಹಿನ್ನೆಲೆಯಲ್ಲಿ, ಇ ತ್ಯಾಜ್ಯದ ಅಧಿಕೃತ ಸಂಗ್ರಹ, ಕೇಂದ್ರ, ಸಗಟು ಗ್ರಾಹಕರು, ಪುನರ್‍ಬಳಕೆದಾರರು, ಅಲ್ಲಿ ಅನುಸರಿಸುವ ವಿಧಾನಗಳು ಸೇರಿದಂತೆ ಇ ತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ವಿವರಗಳನ್ನು ನೀಡಲೇ ಸೂಚಿಸಲಾಗಿದೆ ಎಂದು ನ್ಯಾ. ಯು.ಎಸ್. ಸಾಳ್ವಿ ಹೇಳಿದ್ದಾರೆ. ಮುಂದಿನ ವಿಚಾರಣೆ ಡಿ.3ರಂದು ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


