ಭಾರತದ ಮೇಲೆ ದಾಳಿಗೆ ಒಗ್ಗೂಡಿದ ಉಗ್ರ ಸಂಘಟನೆಗಳು
26/11 ಮುಂಬೈ ಮೇಲೆ ಉಗ್ರರು ನಡೆಸಿದ ಪೈಶಾಚಿಕ ಕೃತ್ಯ ನಡೆದು ನಿನ್ನೆಗೆ 8 ವರ್ಷ ಕಳೆದಿದೆ. ದಾಳಿಯ ಕರಾಳ ದಿನವನ್ನು ಭಾರತೀಯ ನೆನಪು ಮಾಡಿಕೊಳ್ಳುತ್ತಿರುವ ಬೆನ್ನಲ್ಲೇ ಇದೀಗ ಗುಪ್ತಚರ ಇಲಾಖೆ ಭಾರತಕ್ಕೆ ಎಚ್ಚರಿಕೆ ಸಂದೇಶವನ್ನು ನೀಡಿದೆ...

ನವದೆಹಲಿ: 26/11 ಮುಂಬೈ ಮೇಲೆ ಉಗ್ರರು ನಡೆಸಿದ ಪೈಶಾಚಿಕ ಕೃತ್ಯ ನಡೆದು ನಿನ್ನೆಗೆ 8 ವರ್ಷ ಕಳೆದಿದೆ. ದಾಳಿಯ ಕರಾಳ ದಿನವನ್ನು ಭಾರತೀಯ ನೆನಪು ಮಾಡಿಕೊಳ್ಳುತ್ತಿರುವ ಬೆನ್ನಲ್ಲೇ ಇದೀಗ ಗುಪ್ತಚರ ಇಲಾಖೆ ಭಾರತಕ್ಕೆ ಎಚ್ಚರಿಕೆ ಸಂದೇಶವನ್ನು ನೀಡಿದೆ. ಭಾರತದ ಶಾಂತಿ ಹಾಗೂ ಮತೀಯ ಸಾಮರಸ್ಯ ಕದಡಲು ಇದೀಗ ಉಗ್ರ ಸಂಘಟನೆಗಳು ಸಂಜು ರೂಪಿಸಿದ್ದು, ಉಗ್ರ ಸಂಘಟನೆಗಳು ಒಗ್ಗೂಡಿ ದಾಳಿ ಮಾಡುವ ಸಾಧ್ಯತೆ ಇದೆ ಎಂದು ಅಧಿಕಾರಿಗಳ ಎಚ್ಚರಿಕೆ ನೀಡಿದೆ ಎಂದು ಗುರುವಾರ ತಿಳಿದುಬಂದಿದೆ.
ಭಾರತದ ಮೇಲೆ ದಾಳಿ ನಡೆಸಲು ಪಾಕಿಸ್ತಾನ ಮೂಲ ಭಯೋತ್ಪಾದನೆ ಸಂಘಟನೆಗಳಾದ ಲಷ್ಕರ್ ಎ ತೊಯ್ಬಾ, ಜೈಶ್ ಇ ಮೊಹಮ್ಮದ್ (ಜೆಇಎಂ) ಹಾಗೂ ಹಿಜಬ್ ಉಲ್ ಮುಜಾಹೀದ್ದೀನ್ (ಹೆಚ್ ಯುಎಂ) ಭಯೋತ್ಪಾದಕ ಸಂಘಟನೆಗಳು ಒಗ್ಗೂಡಿದ್ದು, ದಾಳಿ ನಡೆಸಲು ಈಗಾಗಲೇ ಸಭೆಯಲ್ಲಿ ಚರ್ಚೆ ನಡೆಸಿದೆ ಎಂದು ತಿಳಿದುಬಂದಿದೆ.
ಪಾಕ್ ಗುಪ್ತಚರ ಸಂಸ್ಥೆ ಭಾರತದಲ್ಲಿ ಶಾಂತಿ ಕದಡಲು ಚಿಂತನೆ ನಡೆಸುತ್ತಿದ್ದು, ಅದಕ್ಕಾಗಿ ಭಯೋತ್ಪಾದಕ ಸಂಘಟನೆಗಳ ನಡುವೆ ಒಗ್ಗಟ್ಟು ಮೂಡಿಸಲು ಮುಂದಾಗಿದೆ. ಇದರ ಮುಂದುವರಿದ ಭಾಗವಾಗಿ ತಂಗ್ ಧರ್ ಸೇನಾ ಕ್ಯಾಂಪ್ ಮೇಲೆ ದಾಳಿ ನಡೆಸಲಾಗಿತ್ತು. ತನ್ನ ಸಂಚಿನಂತೆಯೇ ಉಗ್ರರ ಸಂಘಟನೆಗಳು ಈದೀಗ ಸುಮಾರು 30ಕ್ಕೂ ಹೆಚ್ಚು ಉಗ್ರರನ್ನು ಭಾರತಕ್ಕೆ ಕಳುಹಿಸಿದ್ದು, ಭಾರತದೊಳಗೆ ನುಸುಳಲು ಉಗ್ರರು ಚಿಂತನೆ ನಡೆಸುತ್ತಿದ್ದಾರೆಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ. ಉಗ್ರರು ಇದೀಗ ಜನನಿಬಿಡ ಪ್ರದೇಶಗಳಾದ ಸಾರ್ವಜನಿಕ ಪ್ರವಾಸಿ ತಾಣ, ಸ್ಮಾರಕಗಳು ಹಾಗೂ ಧಾರ್ಮಿಕ ಶ್ರದ್ಧಾ ಕೇಂದ್ರಗಳನ್ನು ಗುರಿಯಾಗಿರಿಸಿಕೊಂಡಿದ್ದು, ಜನನಿಬಿಡ ಪ್ರದೇಶಗಳ ಮೇಲೆ ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


