ರಾಜೀವ್ ಗಾಂಧಿ, ಇಂದಿರಾಗಾಂಧಿ ಬಗ್ಗೆ ಹೇಳಿಕೆಗೆ ಕೇಂದ್ರ ಸಚಿವ ಥಾವರ್ ಚಂದ್ ಗೆಹ್ಲೋಟ್ ವಿಷಾದ
ಕಾಂಗ್ರೆಸ್ ಪಕ್ಷದ ತಪ್ಪು ನೀತಿಗಳೇ ರಾಜೀವ್ ಗಾಂಧಿ, ಇಂದಿರಾ ಗಾಂಧಿ ಹತ್ಯೆಗೆ ಕಾರಣ ಎಂದಿದ್ದ ಕೇಂದ್ರ ಸಚಿವ ಥಾವರ್ ಚಂದ್ ಗೆಹ್ಲೋಟ್ ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ್ದಾರೆ.

ನವದೆಹಲಿ: ಕಾಂಗ್ರೆಸ್ ಪಕ್ಷದ ತಪ್ಪು ನೀತಿಗಳೇ ರಾಜೀವ್ ಗಾಂಧಿ, ಇಂದಿರಾ ಗಾಂಧಿ ಹತ್ಯೆಗೆ ಕಾರಣ ಎಂದಿದ್ದ ಕೇಂದ್ರ ಸಚಿವ ಥಾವರ್ ಚಂದ್ ಗೆಹ್ಲೋಟ್ ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ್ದಾರೆ.
ಮಾಜಿ ಪ್ರಧಾನಿ ರಾಜೀವ್ ಗಾಂಧಿ, ಇಂದಿರಾಗಾಂಧಿ ಹತ್ಯೆ ಬಗ್ಗೆ ನ.26 ರಂದು ಸಂಸತ್ ನಲ್ಲಿ ಹೇಳಿಕೆ ನೀಡಿದ್ದ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ಪಕ್ಷ ನೊಟೀಸ್ ನೀಡಿತ್ತು. ಈ ಹಿನ್ನೆಲೆಯಲ್ಲಿ ತಮ್ಮ ಹೇಳಿಕೆಗೆ ಗೆಹ್ಲೋಟ್ ವಿಷಾದ ವ್ಯಕ್ತಪಡಿಸಿದ್ದಾರೆ.
ಗೆಹ್ಲೋಟ್ ಗೈರು ಹಾಜರಿಯಲ್ಲಿ ಕಾಂಗ್ರೆಸ್ ಸದಸ್ಯರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಂಸದೀಯ ವ್ಯವಹಾರಗಳ ಸಚಿವ ವೆಂಕಯ್ಯ ನಾಯ್ಡು, ರಾಜೀವ್ ಗಾಂಧಿ, ಇಂದಿರಾಗಾಂಧಿ ಹತ್ಯೆಗೆ ಕಾಂಗ್ರೆಸ್ ಪಕ್ಷದ ತಪ್ಪು ನೀತಿಗಳು ಕಾರಣ ಎಂದು ಹೇಳಿರುವುದು ಸರಿಯಲ್ಲ ಎಂದಿದ್ದಾರೆ. ವೆಂಕಯ್ಯ ನಾಯ್ಡು ಅವರ ಹೇಳಿಕೆಗೆ ಸಮಾಧಾನವಾಗದ ಕಾಂಗ್ರೆಸ್ ಸದಸ್ಯರು ಗೆಹ್ಲೋಟ್ ಉಪಸ್ಥಿತಿಗೆ ಒಟ್ಟಾಯಿಸಿದರಲ್ಲದೇ ಸಚಿವರು ಕ್ಷಮೆ ಕೇಳಬೇಕು ಎಂದೂ ಆಗ್ರಹಿಸಿದರು.
ಕಾಂಗ್ರೆಸ್ ಸದಸ್ಯರ ಬೇಡಿಕೆಯನ್ನು ವೆಂಕಯ್ಯ ನಾಯ್ಡು ತಿರಸ್ಕರಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ಮುಂದಾದರು. ಈ ಬೆಳವಣಿಗೆ ನಂತರ ಸಂಸತ್ ಗೆ ಆಗಮಿಸಿದ ಗೆಹ್ಲೋಟ್ ತಮ್ಮ ಹೇಳಿಕೆ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


