ಪಂಜಾಬ್ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿ ಅಮರೀಂದರ್ ನೇಮಕ
ಪಂಜಾಬ್ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿ ಮಾಜಿ ಸಿಎಂ ಅಮರೀಂದರ್ ಸಿಂಗ್ ಶುಕ್ರವಾರ ನೇಮಕಗೊಂಡಿದ್ದಾರೆ...

Published On :
ನವದೆಹಲಿ: ಪಂಜಾಬ್ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿ ಮಾಜಿ ಸಿಎಂ ಅಮರೀಂದರ್ ಸಿಂಗ್ ಶುಕ್ರವಾರ ನೇಮಕಗೊಂಡಿದ್ದಾರೆ. 2017ರ ಪಂಜಾಬ್ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷದ ರಾಜ್ಯ ಘಟಕದಲ್ಲಿ ನಡೆದ ಪ್ರಮುಖ ಪುನಾರಚನೆ ಇದಾಗಿದೆ.
ಅದರಂತೆ, ಹಿರಿಯ ನಾಯಕಿ ಅಂಬಿಕಾ ಸೋನಿ ಅವರನ್ನು ಚುನಾವಣಾ ಪ್ರಚಾರ ಸಮಿತಿಯ ಮುಖ್ಯಸ್ಥೆಯನ್ನಾಗಿ ನೇಮಿಸಲಾಗಿದೆ. ತಕ್ಷಣಕ್ಕೆ ಜಾರಿಯಾಗುವಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ಅವರೇ ಈ ನೇಮಕ ಮಾಡಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜನಾರ್ದನ ದ್ವಿವೇದಿ ಶುಕ್ರವಾರ ಪ್ರಕಟಿಸಿದ್ದಾರೆ.
ಪ್ರತಾಪ್ ಸಿಂಗ್ ಬಾಜ್ವಾ ಅವರ ಸ್ಥಾನವನ್ನು ಕ್ಯಾ.ಅಮರೀಂದರ್ ಸಿಂಗ್ ಅಲಂಕರಿಸಿದ್ದಾರೆ. ಪಂಜಾಬ್‍ನ ಮಾಜಿ ಸಚಿವ ಲಾಲ್ ಸಿಂಗ್ ಅವರು ಪಿಐಸಿ ಹಿರಿಯ ಉಪಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


