ಇಡೀ ಭಾರತೀಯ ಸೇನೆಯಿಂದಲೂ ಕಾಶ್ಮೀರವನ್ನು ಉಗ್ರರಿಂದ ರಕ್ಷಿಸಲು ಸಾಧ್ಯವಿಲ್ಲ: ಫಾರೂಕ್ ಅಬ್ದುಲ್ಲಾ
ನಿನ್ನೆಯಷ್ಟೇ ಪಾಕ್ ಆಕ್ರಮಿತ ಕಾಶ್ಮೀರ ಪಾಕಿಸ್ತಾನನದ್ದು ಎಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದ ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ...

ಜಮ್ಮು: ನಿನ್ನೆಯಷ್ಟೇ ಪಾಕ್ ಆಕ್ರಮಿತ ಕಾಶ್ಮೀರ ಪಾಕಿಸ್ತಾನನದ್ದು ಎಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದ ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರು ಈಗ ಇಡೀ ಭಾರತೀಯ ಸೇನೆಯೇ ಬಂದರೂ ಕಾಶ್ಮೀರವನ್ನು ಉಗ್ರರಿಂದ ರಕ್ಷಿಸಲು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ಮತ್ತೊಂದು ವಿವಾದಾಕ್ಕೆ ಕಾರಣವಾಗಿದ್ದಾರೆ.
'ಇಡೀ ಭಾರತೀಯ ಸೇನೆಯೇ ಜಮ್ಮು ಮತ್ತು ಕಾಶ್ಮೀರಕ್ಕೆ ಬಂದರೂ ಕಾಶ್ಮೀರವನ್ನು ಉಗ್ರರಿಂದ ರಕ್ಷಿಸುವುದಕ್ಕೆ ಸಾಧ್ಯವಾಗದು' ಎಂದು ಹೇಳುವ ಮೂಲಕ ಅಬ್ದುಲ್ಲಾ ಅವರು ವಿಶ್ವದ ಅತೀ ಬಲಿಷ್ಠ ಸೇನಾಶಕ್ತಿಗಳಲ್ಲಿ ಒಂದಾದ ಭಾರತೀಯ ಸೇನೆಯನ್ನು ನಿಕೃಷ್ಟವಾಗಿ ಕಂಡಿದ್ದಾರೆ.
ಭಾರತ ಮತ್ತು ಪಾಕಿಸ್ತಾನ ಕೇವಲ ಮಾತುಕತೆಯ ಮೂಲಕವೇ ಕಾಶ್ಮೀರ ವಿವಾದವನ್ನು ಬಗೆಹರಿಸಿಕೊಳ್ಳಬಲ್ಲವು, ಅದಕ್ಕೆ ಬೇರೆ ಮಾರ್ಗವೇ ಇಲ್ಲ ಎಂದು ಅಬ್ದುಲ್ಲಾ ಹೇಳಿರುವುದಾಗಿ ಎಎನ್‌ಐ ವರದಿ ಮಾಡಿದೆ
ಉಭಯ ದೇಶಗಳ ಜನರ ನಡುವೆ ನೇರ ಸಂಪರ್ಕ - ಸಂವಹನಕ್ಕೆ ಅವಕಾಶವಾದಾಗಲೇ ಪರಸ್ಪರ ವಿಶ್ವಾಸ ಹಾಗೂ ನಿರ್ಭಯದ ವಾತಾವರಣ ಸೃಷ್ಟಿ ಮಾಡಲು ಸಾಧ್ಯ ಎಂದು ಅಬ್ದುಲ್ಲಾ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


