ದಕ್ಷಿಣ ಭಾರತದ ಮುಸ್ಲಿಂ ಯುವಕರೇ ಹೆಚ್ಚಾಗಿ ಇಸಿಸ್ ಕಡೆಗೆ ಆಕರ್ಷಿತರಾಗುತ್ತಿದ್ದಾರೆ: ಕಿರಣ್ ರಿಜಿಜು
ದಕ್ಷಿಣ ಭಾರತದ ಕರ್ನಾಟಕ, ಕೇರಳ, ತಮಿಳುನಾಡು, ತೆಲಂಗಾಣ, ಮತ್ತು ಆಂಧ್ರ ಪ್ರದೇಶ ರಾಜ್ಯಗಳ ಮುಸ್ಲಿಂ ಯುವಕರು ಹೆಚ್ಚಾಗಿ ಇಸಿಸ್ ಉಗ್ರ ಸಂಘಟನೆಗೆ ಬಗ್ಗೆ ...

ನವದೆಹಲಿ: ದಕ್ಷಿಣ ಭಾರತದ ಕರ್ನಾಟಕ, ಕೇರಳ, ತಮಿಳುನಾಡು, ತೆಲಂಗಾಣ, ಮತ್ತು ಆಂಧ್ರ ಪ್ರದೇಶ ರಾಜ್ಯಗಳ ಮುಸ್ಲಿಂ ಯುವಕರು ಹೆಚ್ಚಾಗಿ ಇಸಿಸ್ ಉಗ್ರ ಸಂಘಟನೆಗೆ ಬಗ್ಗೆ ಆಕರ್ಷಿತರಾಗುತ್ತಿದ್ದಾರೆ ಎಂದು ಸಚಿವ ಕಿರೆಣ್ ರಿಜಿಜು ಹೇಳಿದ್ದಾರೆ.
ಈ ರೀತಿಯ ಹೇಳಿಕೆ ನೀಡುವುದಕ್ಕೆ ನನಗೆ ತುಂಬಾ ಕಷ್ಟವಾಗುತ್ತಿದೆ ಎಂದು ಹೇಳಿರುವ ಕಿರೆಣ್ ರಿಜಿಜು, ಮಧ್ಯ ಪ್ರಾಚ್ಯ ರಾಷ್ಟ್ರಗಳೊಂದಿಗೆ ದಕ್ಷಿಣ ಭಾರತ ರಾಜ್ಯಗಳು ಸಾಂಪ್ರಾದಾಯಿಕ ಸಂಬಂಧ ಹೊಂದಿದ್ದಾರೆ. ಬಹಳ ಹಿಂದಿನ ಕಾಲದಿಂದಲೂ ಮಧ್ಯಪ್ರಾಚ್ಯ ದೇಶಗಳೊಂದಿಗೆ ದಕ್ಷಿಣ ರಾಜ್ಯಗಳ ಸಂಚಾರ ವಿನಿಮಯವಿದೆ. ಆದರೆ ಇದು ಇಸಿಸ್ ಕಡೆಗೆ ಆಕರ್ಷಿತವಾಗಲು ಕಾರಣ ಎಂದು ನಾನು ಹೇಳುತ್ತಿಲ್ಲ ಎಂದು ಅವರು ಸ್ಪಷ್ಪ ಪಡಿಸಿದ್ದಾರೆ.
ಇನ್ನು ವಿಶ್ವದ ಇತರೆಡೆ ನಡೆದ ದಾಳಿಯನ್ನು ಗಮನದಲ್ಲಿರಿಸಿಕೊಂಡಿರುವ ಭಾರತ, ಎಂಥಹುದ್ದೇ ಪರಿಸ್ಥಿತಿ ಎದುರಿಸಲು ಸಿದ್ದವಿದೆ ಎಂದು ಕಿರೆಣ್ ರಿಜಿಜು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


