ದೇಶ

ನನ್ನ ಬೆಡ್ ರೂಂ ವಿಷಯ ಕೇಳುವ ಹಕ್ಕು ಯಾರಿಗೂ ಇಲ್ಲ: ಸಾನಿಯಾ

ಸಂದರ್ಶನದ ವೇಳೆ ಫ್ಯಾಮಿಲಿ ಪ್ಲಾನಿಂಗ್ ಬಗ್ಗೆ ಏನು ಯೋಚಿಸುತ್ತಿದ್ದೀರಾ ಎಂದು ಬಿಬಿಸಿ ಸಂದರ್ಶಕ ಕೇಳಿದ ಪ್ರಶ್ನೆಗೆ ಆಕ್ರೋಶಗೊಂಡ ಭಾರತದ ಟೆನ್ನಿಸ್ ತಾರೆ ಸಾನಿಯಾ...

ನನ್ನ ಬೆಡ್ ರೂಂ ವಿಷಯ ಕೇಳುವ ಹಕ್ಕು ಯಾರಿಗೂ ಇಲ್ಲ: ಸಾನಿಯಾ
ಸಾನಿಯಾ ಮಿರ್ಜಾ
Published On :
ನವದೆಹಲಿ: ಸಂದರ್ಶನದ ವೇಳೆ ಫ್ಯಾಮಿಲಿ ಪ್ಲಾನಿಂಗ್ ಬಗ್ಗೆ ಏನು ಯೋಚಿಸುತ್ತಿದ್ದೀರಾ ಎಂದು ಬಿಬಿಸಿ ಸಂದರ್ಶಕ ಕೇಳಿದ ಪ್ರಶ್ನೆಗೆ ಆಕ್ರೋಶಗೊಂಡ ಭಾರತದ ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ 'ನನ್ನ ಬೆಡ್ ರೂಮಿನಲ್ಲಿ ಏನಾಗುತ್ತಿದೆ ಎಂಬುದನ್ನು ಕೇಳುವ ಹಕ್ಕು ಯಾರಿಗೂ ಇಲ್ಲ' ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.
ಪುರುಷ ಪ್ರಧಾನ ಸಮಾಜದಲ್ಲಿ ಬದುಕುತ್ತಿದ್ದು, ಮಹಿಳೆಯಾಗಿ ಈ ಸಮಾಜದಲ್ಲಿ ಬದುಕುವುದು ಬಹಳ ಕಷ್ಟ. ಅಂತಹದರಲ್ಲಿ ಸಾರ್ವಜನಿಕ ಜೀವನದಲ್ಲಿದ್ದೇನೆ ಎಂಬ ಮಾತ್ರಕ್ಕೆ ಈ ರೀತಿ ಮಹಿಳೆಯ ಖಾಸಗಿ ವಿಷಯದ ಬಗ್ಗೆ ಪ್ರಶ್ನೆ ಕೇಳುವುದು ಸರಿ ಅಲ್ಲ. ಒಬ್ಬ ಮಹಿಳೆ ಮನೆಯಿಂದ ಹೊರಬಂದು ಸಾಧನೆಗೆ ಹೊರಟರೆ ಆಕೆ ರೆಬಲ್ ಎನ್ನುತ್ತಾರೆ. ಆದರೆ, ಪುರುಷನನ್ನು ಕೆರಿಯರ್ ಮೈಂಡೆಡ್ ಎನ್ನುತ್ತಾರೆ ಎಂದರು. 
ಟೆನ್ನಿಸ್ ಕ್ಷೇತ್ರದಲ್ಲಿ ಎಷ್ಟೆಲ್ಲ ಸಾಧನೆ ಮಾಡಿದ್ದರು ತಾನು ಯಾವಾಗ ಮಕ್ಕಳನ್ನು ಪಡೆಯುತ್ತೇನೆ ಎಂಬ ವಿಷಯದ ಬಗ್ಗೆ ಪ್ರಶ್ನೆ ಕೇಳುತ್ತಿರಾ ಎಂದು ಸಾನಿಯಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪಾಕಿಸ್ತಾನ ಕ್ರಿಕೆಟಿಗ ಶೋಯಿಬ್ ಮಲಿಕ್ ರನ್ನು 2010ರಲ್ಲಿ ಸಾನಿಯಾ ಮಿರ್ಜಾ ವಿವಾಹವಾಗಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.