ದೇಶ

ಮೋದಿಯಿಂದ ಇಂದು ಪತ್ರಕರ್ತರ ಭೇಟಿ

ವಿರೋಧ ಪಕ್ಷದ ನಾಯಕರುಗಳ ಭೇಟಿಯ ನಂತರ ಪ್ರಧಾನಿ ನರೇಂದ್ರ ಮೋದಿ ಇಂದು ಪತ್ರಕರ್ತರನ್ನು ಭೇಟಿ ಮಾಡಲಿದ್ದಾರೆ. ..

ಮೋದಿಯಿಂದ ಇಂದು ಪತ್ರಕರ್ತರ ಭೇಟಿ
ನರೇಂದ್ರ ಮೋದಿ
Published On :

ನವದೆಹಲಿ: ವಿರೋಧ ಪಕ್ಷದ ನಾಯಕರುಗಳ ನಂತರ ಪ್ರಧಾನಿ ನರೇಂದ್ರ ಮೋದಿ ಇಂದು ಪತ್ರಕರ್ತರನ್ನು ಭೇಟಿ ಮಾಡಲಿದ್ದಾರೆ.

ಜಿಎಸ್ ಟಿ ಮಸೂದೆ ಸಂಬಂಧ ಚರ್ಚೆ ಮಾಡಲು, ವಿರೋಧ ಪಕ್ಷದ ನಾಯಕರಾದ ಸೋನಿಯಾ ಗಾಂಧಿ ಮತ್ತು ಮನಮೋಹನ್ ಸಿಂಗ್ ಅವರನ್ನು ಚಾಯ್ ಪೆ ಚರ್ಚೆಯಲ್ಲಿ ಭೇಟಿ ಮಾಡಿದ ಮೋದಿ, ಇಂದು ಭಾರತೀಯ ಜನತಾ ಪಕ್ಷದ ಪ್ರಧಾನ ಕಚೇರಿಯಲ್ಲಿ ದೀಪಾವಳಿ ಮಂಗಲ್ ಮಿಲನ್ ಕಾರ್ಯಕ್ರಮದ ಅಂಗವಾಗಿ ಪತ್ರಕರ್ತರನ್ನು ಭೇಟಿ ಮಾಡಲಿದ್ದಾರೆ.

ಈ ಕಾರ್ಯಕ್ರಮ ದೀಪಾವಳಿ ವೇಳೆ ನಡೆಯಬೇಕಿತ್ತು. ಆದರೆ ಮೋದಿ ವಿದೇಶ ಪ್ರವಾಸದಲ್ಲಿ ಇದ್ದುದ್ದರಿಂದ ಕಾರ್ಯಕ್ರಮ ತಡವಾಗಿ ನಡೆಯುತ್ತಿದೆ. ಇನ್ನೂ ಈ ಕಾರ್ಯಕ್ರಮದಲ್ಲಿ ಅರುಣ್ ಜೈಟ್ಲಿ ಮತ್ತು ರವಿಶಂಕರ್ ಪ್ರಸಾದ್ ಪಾಲ್ಗೋಳ್ಳಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.