ದೆಹಲಿ ವಿಧಾಸಭೆಯಲ್ಲಿ ಜನಲೋಕಪಾಲ ವಿಧೇಯಕ ಮಂಡನೆ
ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರ ಕಡೆಗೂ ಭ್ರಷ್ಟಾಚಾರ ವಿರೋಧಿ ಜನಲೋಕಪಾಲ ವಿಧೇಯಕವನ್ನು ಸೋಮವಾರ...

ನವದೆಹಲಿ: ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರ ಕಡೆಗೂ ಭ್ರಷ್ಟಾಚಾರ ವಿರೋಧಿ ಜನಲೋಕಪಾಲ ವಿಧೇಯಕವನ್ನು ಸೋಮವಾರ ದೆಹಲಿ ವಿಧಾನಸಭೆಯಲ್ಲಿ ಮಂಡಿಸಿದೆ.
ವಿಧೇಯಕ ಮಂಡಿಸಿ ಮಾತನಾಡಿದ ದೆಹಲಿ ಉಪ ಮುಖ್ಯಮಂತ್ರಿ ಮನಿಶ್ ಸಿಸೋಡಿಯಾ ಅವರು, ಇದೊಂದು ಐತಿಹಾಸಿ ವಿಧೇಯಕ ಮತ್ತು ಇಂತಹ ಪರಿಣಾಮಕಾರಿ ಕಾನೂನು ಮತ್ತೊಂದಿಲ್ಲ ಎಂದಿದ್ದಾರೆ.
ಆಡಳಿತರೂಢ ಆಮ್ ಆದ್ಮಿ ಪಕ್ಷದ ಶಾಸಕರು ಮೆಜು ಕುಟ್ಟಿ, ಘೋಷಣೆ ಕೂಗಿ ವಿಧೇಯಕವನ್ನು ಸ್ವಾಗತಿಸಿದರು. ಆದರೆ ಪ್ರತಿಪಕ್ಷ ಬಿಜೆಪಿ ಸದಸ್ಯರು ಮಾತ್ರ ಸದನಕ್ಕೆ ಗೈರು ಆಗಿದ್ದರು.
ಜನಲೋಕಪಾಲ ವಿಧೇಯಕದ ಪ್ರಕಾರ, ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವವರಿಗೆ ಜೀವಾವಧಿ ಶಿಕ್ಷೆ ಹಾಗೂ ಸರ್ಕಾರಕ್ಕೆ ಹಾನಿಯಾದ ಐದು ಪಟ್ಟು ದಂಡ ವಿಧಿಸಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


