ಭಾರತದಲ್ಲಿ ಸಹಿಷ್ಣುತೆ ಇದೆ: ಕೇಂದ್ರ ಸರ್ಕಾರ
ವಿವಾದಿತ ಅಸಹಿಷ್ಣುತೆ ವಿವಾದ ಲೋಕಸಭೆಯಲ್ಲಿ ಚರ್ಚೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸರ್ಕಾರವು ಭಾರತದಲ್ಲಿ ಅಸಹಿಷ್ಣುತೆ ಇಲ್ಲ. ಸಹಿಷ್ಣುತೆ ಇದೆ ಎಂದು ಸೋಮವಾರ ಹೇಳಿದೆ....

ನವದೆಹಲಿ: ಭಾರತದಲ್ಲಿ ಅಸಹಿಷ್ಣುತೆ ಇಲ್ಲ. ಸಹಿಷ್ಣುತೆ ಇದೆ ಎಂದು ಕೇಂದ್ರ ಸರ್ಕಾರ ಸೋಮವಾರ ಹೇಳಿದೆ.
ವಿವಾದ ಅಸಹಿಷ್ಣುತೆ ವಿವಾದ ಲೋಕಸಭೆಯಲ್ಲಿ ಚರ್ಚೆಯಾಗುವುದರ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಸಂಸದೀಯ ವ್ಯವಹಾರಗಳ ಸಚಿವ ವೆಂಕಯ್ಯ ನಾಯ್ಡು ಅವರು, ಅಸಹಿಷ್ಣುತೆ ಕುರಿತ ಚರ್ಚೆಗೆ ಕೇಂದ್ರ ಸರ್ಕಾರ ತಯಾರಾಗಿದೆ. ಆದರೆ ಸರ್ಕಾರ ಈ ಬಗ್ಗೆ ಸಮರ್ಥನೆ ನೀಡಲು ಪ್ರತಿಪಕ್ಷಗಳು ಸಹಕಾರ ನೀಡಬೇಕಿದ್ದು, ಕಲಾಪ ಸುಗಮವಾಗಿ ನಡೆಸಲು ವಿಪಕ್ಷಗಳು ಸಂಯಮ ವಹಿಸುವ ಅಗತ್ಯವಿದೆ ಎಂದು ಹೇಳಿದ್ದಾರೆ.
ನರೇಂದ್ರ ನೇತೃತ್ವದ ಸರ್ಕಾರದ ಅವಧಿಯಲ್ಲಿ ದೇಶದಲ್ಲಿ ಅಸಹಿಷ್ಣುತೆ ಪರಿಸ್ಥಿತಿ ಸೃಷ್ಟಿಯಾಗಿಲ್ಲ. ಈಗಲೇ ದೇಶದಲ್ಲಿ ಸಹಿಷ್ಣುತೆ ಇದೆ ಎಂದು ಹೇಳಿದ್ದಾರೆ.
ಇದೇ ವೇಳೆ ಜಿಎಸ್ ಟಿ ಮಸೂದೆ ಕುರಿತಂತೆ ಮಾತನಾಡಿರುವ ಅವರು, ಸರಕು ಮತ್ತು ಸೇವಾ ತೆರಿಗೆ ಮಸೂದೆಯು ಮುಂದಿನ ಹಣಕಾಸು ವರ್ಷದಲ್ಲಿ ಜಾರಿಗೆ ಬರಲಿದೆ. ಜಿಎಸ್ ಟಿ ಮಸೂದೆಗೆ ಈಗಾಗಲೇ ಲೋಕಸಭೆಯಲ್ಲಿ ಅಂಗೀಕಾರ ದೊರೆತಿದೆ. ಆದರೆ, ರಾಜ್ಯಸಭೆಯಸಲ್ಲಿರುವ ವಿರೋಧಗಳು ಮಸೂದೆಯನ್ನು ಆಯ್ಕೆ ಸಮಿತಿಗೆ ಶಿಪಾರಸ್ಸು ಮಾಡಿದೆ. ಇದೀಗ ಆಯ್ಕೆ ಸಮಿತಿ ಕೂಡ ಮಸೂದೆಗೆ ಅಂಗೀಕಾರ ನೀಡಿದ್ದು, ಮಸೂದೆ ಕುರಿತಂತೆ ಆಯ್ಕೆ ಸಮಿತಿ ಈಗಾಗಲೇ ಅಧ್ಯಯನ ನಡೆಸಿದ್ದು, ಈ ಬಗೆಗಿನ ವಿವರಣೆಯನ್ನು ರಾಜ್ಯಸಭೆಗೆ ಶಿಫಾರಸ್ಸು ಮಾಡಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


