ದೇಶ

ಪ್ರಚೋದನಾಕಾರಿ ಹೇಳಿಕೆ ನೀಡದಂತೆ ಸಂಸದರಿಗೆ ಬಿಜೆಪಿ ಎಚ್ಚರಿಕೆ

ಪ್ರಚೋದನಕಾರಿ ಹೇಳಿಕೆ ನೀಡುತ್ತಿರುವುದನ್ನು ಬಿಜೆಪಿ ನಾಯಕರು ನಿಯಂತ್ರಿಸಬೇಕೆಂದು ಸಂಸದರು ಹೇಳಿದ್ದರೆಂದು ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ...

ಪ್ರಚೋದನಾಕಾರಿ ಹೇಳಿಕೆ ನೀಡದಂತೆ ಸಂಸದರಿಗೆ ಬಿಜೆಪಿ ಎಚ್ಚರಿಕೆ
ಮುಖ್ತಾರ್ ಅಬ್ಬಾಸ್ ನಖ್ವಿ
Published On :

ನವದೆಹಲಿ: ಪ್ರಚೋದನಕಾರಿ ಹೇಳಿಕೆ ನೀಡುತ್ತಿರುವುದನ್ನು ಬಿಜೆಪಿ ನಾಯಕರು ನಿಯಂತ್ರಿಸಬೇಕೆಂದು ಸಂಸದರು ಹೇಳಿದ್ದರೆಂದು ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಅವರು ಮಂಗಳವಾರ ಹೇಳಿದ್ದಾರೆ.

ಸಂಸದೀಯ ಪಕ್ಷದ ಸಭೆ ನಂತರ ಪ್ರತಿಕ್ರಿಯೆ ನೀಡಿರುವ ಅವರು, ಪ್ರಚೋದನಕಾರಿ ಹೇಳಿಕೆ ಕುರಿತಂತೆ ಪಕ್ಷದ ಸಂಸದರು ನಾಯಕರಿಗೆ ಎಚ್ಚರಿಕೆ ನೀಡಿದ್ದರು. ಪ್ರಚೋದನಕಾರಿ ಹೇಳಿಕೆಗಳು ಪಕ್ಷದ ಮೇಲೆ ಪರಿಣಾಮ ಬೀರುತ್ತಿದ್ದು, ನಾಯಕರು ಹೇಳಿಕೆ ನೀಡುವಾಗ ಯೋಚಿಸಿ ನೀಡಬೇಕಿದ್ದು, ಪ್ರಚೋದನಾಕಾರಿ ಹೇಳಿಕೆಯನ್ನು ನಿಯಂತ್ರಿಸಬೇಕೆಂದು ಹೇಳಿದ್ದರೆಂದು ಹೇಳಿದ್ದಾರೆ.

ದೇಶದ ಅಭಿವೃದ್ಧಿ ಪಥದತ್ತ ಕೊಂಡೊಯ್ಯುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಚಿಂತನೆಯನ್ನು ಜೀರ್ಣಸಿಕೊಳ್ಳಲು ಕೆಲವರಿಗೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಬಿಜೆಪಿ ವಿರೋಧಿಗಳು ಪಕ್ಷದ ವಿರುದ್ಧ ಕೆಲವು ಪಿತೂರಿಗಳನ್ನು ರೂಪಿಸುತ್ತಿದೆ. ಇಂತಹವರಿಗೆ ಪಕ್ಷದ ನಾಯಕರು ನೀಡುತ್ತಿರುವ ಪ್ರಚೋದನಕಾರಿ ಹೇಳಿಕೆಗಳು ಆಹಾರವಾಗುತ್ತಿದೆ. ಹೀಗಾಗಿ ನಾಯಕರು ಪ್ರಚೋದನಕಾರಿ ಹೇಳಿಕೆ ನೀಡುವುದನ್ನು ಬಿಡಬೇಕಿದೆ. ಅಸಹಿಷ್ಣುತೆ ವಿಚಾರವೊಂದು ಮುಖವಾಡವಾಗಿದ್ದು, ದೇಶವನ್ನು ದಾರಿ ತಪ್ಪಿಸುವ ಪಿತೂರಿಯಾಗಿದೆ. ಎನ್ ಡಿಎ ನೇತೃತ್ವದ ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದಾಗಿನಿಂದ ಇಂದಿನವರೆಗೂ ಕೋಮುಗಲಭೆಗಳು ನಿಯಂತ್ರಣದಲ್ಲಿದೆ ಎಂದು ಸಂಸದರು ಹೇಳಿದ್ದಾರೆಂದು ನಖ್ವಿ ಹೇಳಿದ್ದಾರೆ.

ಇದೇ ವೇಳೆ ಬಿಹಾರ ಚುನಾವಣೆ ಫಲಿತಾಂಶ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಪಕ್ಷ ಸಾಕಷ್ಟು ಶ್ರಮ ಪಟ್ಟಿದೆ. ಜನರ ಆಯ್ಕೆಯನ್ನು ನಾವು ಗೌರವಿಸುತ್ತೇವೆ. ಅಸಹಿಷ್ಣುತೆ ಚರ್ಚೆಯಲ್ಲಿ ಪ್ರತಿಭಟನೆ ಮಾಡುತ್ತಿರುವವರು ಹಾಗೂ ಮಹಾನ್ ಬುದ್ಧಿಜೀವಿಗಳಂತೆ ನಡೆದುಕೊಳ್ಳುವವರು ಲೋಕಸಭಾ ಚುನಾವಣೆ ವೇಳೆ ಮೋದಿ ವಿರುದ್ಧ ಪ್ರಚಾರ ಮಾಡಿದ್ದರು. ಆದರೆ, ಅಂದು ಅವರ ಪ್ರಚಾರವನ್ನು ಜನರು ಒಪ್ಪಿಕೊಂಡಿರಲಿಲ್ಲ. ಮೋದಿಯವರಿಗೆ ಮತ ಹಾಕಿದ್ದರು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.