ಗಲ್ಲು ಶಿಕ್ಷೆ ಪ್ರಜಾಪ್ರಭುತ್ವಕ್ಕೆ ಕಪ್ಪು ಚುಕ್ಕೆ, ಅದನ್ನು ರದ್ದುಗೊಳಿಸಿ: ಶಶಿ ತರೂರ್
ಗಲ್ಲು ಶಿಕ್ಷೆ ಆರೋಗ್ಯಕರ ಪ್ರಜಾಪ್ರಭುತ್ವದಲ್ಲಿ ಒಂದು ಕಪ್ಪು ಚುಕೆ ಎಂದಿರುವ ಕಾಂಗ್ರೆಸ್ ನಾಯಕ ಶಶಿ ತರೂರ್ ಅವರು,...

ನವದೆಹಲಿ: ಗಲ್ಲು ಶಿಕ್ಷೆ ಆರೋಗ್ಯಕರ ಪ್ರಜಾಪ್ರಭುತ್ವದಲ್ಲಿ ಒಂದು ಕಪ್ಪು ಚುಕೆ ಎಂದಿರುವ ಕಾಂಗ್ರೆಸ್ ನಾಯಕ ಶಶಿ ತರೂರ್ ಅವರು, ಅದನ್ನು ರದ್ದುಗೊಳಿಸಬೇಕು ಎಂದು ಮಂಗಳವಾರ ಒತ್ತಾಯಿಸಿದ್ದಾರೆ.
ಲೋಕಸಭೆಯ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಮಾಜಿ ಕೇಂದ್ರ ಸಚಿವ, ಜನರನ್ನು ತಲ್ಲಿಗೇರಿಸುವುದರಿಂದ ಅಪರಾಧ ತಡೆಯಲು ಸಾಧ್ಯವಿಲ್ಲ. ಗಲ್ಲು ಶಿಕ್ಷೆ ಬದಲು ಬೇರೆ ಕಠಿಣ ಶಿಕ್ಷೆ ನೀಡಬಹುದು ಎಂದಿದ್ದಾರೆ.
ಮಹಾತ್ಮ ಗಾಂಧಿ ಅವರ ಆದರ್ಶಗಳನ್ನು ಎತ್ತಿಹಿಡಿಯಬೇಕಾದರ ನಾವು ಗಲ್ಲು ಶಿಕ್ಷೆಯನ್ನು ರದ್ದುಗೊಳಿಸಬೇಕು. ನನ್ನ ಪ್ರಕಾರ ಶೇ.70ರಷ್ಟು ವಿಶ್ವಸಂಸ್ಥೆಯ ಸದಸ್ಯ ರಾಷ್ಟ್ರಗಳು ಗಲ್ಲು ಶಿಕ್ಷೆಯನ್ನು ರದ್ದುಗೊಳಿಸಿವೆ ಎಂದು ತರೂರ್ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


