ಶಾಸಕಾಂಗ ಪಕ್ಷದ ನಾಯಕ ತೇಜಸ್ವಿ
ಆರ್‍ಜೆಡಿ ನಾಯಕ ಲಾಲು ಪ್ರಸಾದ್ ಪುತ್ರ, ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರನ್ನು ಸೋಮವಾರ ಆರ್‍ಜೆಡಿ ಶಾಸಕಾಂಗ...

Published On :
ಪಟನಾ: ಆರ್‍ಜೆಡಿ ನಾಯಕ ಲಾಲು ಪ್ರಸಾದ್ ಪುತ್ರ, ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರನ್ನು ಸೋಮವಾರ ಆರ್‍ಜೆಡಿ ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ.
ಇದೇ ವೇಳೆ, ಲಾಲು ಪತ್ನಿ ರಾಬ್ಡಿ ದೇವಿ ಅವರು ಬಿಹಾರ ವಿಧಾನಪರಿಷತ್‍ನಲ್ಲಿ ಪಕ್ಷದ ನಾಯಕಿಯಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ತೇಜಸ್ವಿ ಅವರ ಸಹಚರ ಹಾಗೂ ಶಾಸಕರಾದ ಭೋಲಾ ಯಾದವ್ ತಿಳಿಸಿದ್ದಾರೆ.
ಈ ವಿಚಾರ ಬೆಳಕಿಗೆ ಬರುತ್ತಿದ್ದಂತೆ, ಆರ್‍ಜೆಡಿ ವಿರುದ್ಧ ಹರಿಹಾಯ್ದಿರುವ ಬಿಜೆಪಿ, ``ಇದು ವಂಶಾಡಳಿತದ ಮುಕ್ತ ಪ್ರದರ್ಶನ'' ಎಂದು ಹೇಳಿದೆ. ಲಾಲು ಅವರು ಪರಿವಾರವಾದದಲ್ಲಿ ನಂಬಿಕೆಯಿಟ್ಟಿ ದ್ದಾರೆಯೇ ಹೊರತು ಲೋಕತಂತ್ರದಲ್ಲಲ್ಲ ಎಂದೂ ಬಿಹಾರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಪ್ರೇಮïಕುಮಾರ್ ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


